ಹಾವೇರಿ:
ನಾಳೆ ಅಂದರೆ ಮಾರ್ಚ್.10ರಂದು ತಮ್ಮ ತವರು ಜಿಲ್ಲೆ ಹಾವೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುತ್ತಿದ್ದಾರೆ, ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲಾ ಕ್ರೀಡಾಂಗಣದಲ್ಲಿ ಈ ಸಮಾವೇಶವನ್ನು ಆಯೋಜಿಸಲಾಗಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅರಬೈಲ್ ಶಿವರಾಮ ಹೆಬ್ಬಾರ್ ಅವರು ಮಾಹಿತಿ ನೀಡಿದ್ದಾರೆ.ಸಮಾವೇಶದಲ್ಲಿ ಸುಮಾರು 25,000 ಜನರು ಭಾಗವಹಿಸುವ ನಿರೀಕ್ಷೆಯಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ