ಹಿಮಾಚಲ ಪ್ರದೇಶ :ಹಿಮಪಾತದಲ್ಲಿ ಸಿಲುಕಿದ ಪ್ರವಾಸಿಗರು

ನವದೆಹಲಿ:

       ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಮಳೆ ಮತ್ತು ಹಿಮಪಾತವಾಗಿದ್ದು  ಹಲವು ಮಾರ್ಗಗಳನ್ನು ನಿರ್ಬಂಧಿಸಲಾಗಿದೆ. ನೂರಾರು ಪ್ರವಾಸಿಗರು ಹಿಮಪಾತದಲ್ಲಿ ಸಿಕ್ಕಿಕೊಂಡಿರುವುದು ವರದಿಯಾಗಿದೆ.

   ರಸ್ತೆ ಮೇಲೆ ಬಿದ್ದ ಹಿಮವನ್ನು ತೆಗೆಯಲು ಸಾಧ್ಯವಾಗದೆ ಗಂಟೆಗಟ್ಟಲೆ ಕಾಯುವಂತ ಸ್ಥಿತಿ ನಿರ್ಮಾಣವಾಗಿದೆ. ಹಿಮಪಾತದೊಂದಿಗೆ ಮಳೆ ಕೂಡ ಮುಂದುದಿದ್ದು ಪ್ರವಾಸಿಗರು ಆತಂಕದಲ್ಲಿದ್ದಾರೆ. ರಸ್ತೆಯುದ್ದಕ್ಕೂ ವಾಹನಗಳ ಸಾಲುಗಟ್ಟಿನಿಂತಿದ್ದು ಹಿಮ ವಾಹನನಗಳನ್ನು ಸಂಪೂರ್ಣವಾಗಿ ಆವರಿಸಿಕೊಂಡಿದೆ.

    ಹಿಮಾಚಲದ ಮೇಲ್ಭಾಗದಲ್ಲಿ ಅಂದರೆ ಪರ್ವತಗಳಲ್ಲಿ ಹಿಮಪಾತವು ಮುಂದುವರಿಯುತ್ತದೆ. ಕಳೆದ 24 ಗಂಟೆಗಳಲ್ಲಿ ಲಾಹೌಲ್, ಸ್ಪಿತಿ, ಶಿಮ್ಲಾ, ಕುಲು ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಅಧಿಕ ಹಿಮಪಾತ ದಾಖಲಾಗಿದೆ. ಹಾಗೂ ತಗ್ಗು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ತಾಪಮಾನ ಕಡಿಮೆಯಾಗುತ್ತಿದೆ.

   ಹಿಮಾಚಲದಲ್ಲಿ ಹಿಮಪಾತದಿಂದಾಗಿ ಹಲವು ಮಾರ್ಗಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಒಟ್ಟು 216 ರಸ್ತೆಗಳನ್ನು ಬಂದ್ ಮಾಡಲಾಗಿದೆ. ಲಾಹೌಲ್ ಮತ್ತು ಸ್ಪಿತಿಯಲ್ಲಿ ಹೆಚ್ಚಿನ ಮಾರ್ಗಗಳನ್ನು ನಿರ್ಬಂಧಿಸಲಾಗಿದೆ. ಲಾಹೌಲ್ ಮತ್ತು ಸ್ಪಿತಿಯಲ್ಲಿ 148, ಕಿನ್ನೌರ್‌ನಲ್ಲಿ 25, ಕುಲುವಿನಲ್ಲಿ 12, ಚಂಬಾದಲ್ಲಿ 7, ಕಂಗ್ರಾದಲ್ಲಿ 2, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಇದಲ್ಲದೇ ಹಲವೆಡೆ ವಿದ್ಯುತ್ ಪೂರೈಕೆಯೂ ಸ್ಥಗಿತಗೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಸುಮಾರು 150 ಟ್ರಾನ್ಸ್‌ಫಾರ್ಮರ್‌ಗಳು ಮತ್ತು 10 ನೀರಿನ ಯೋಜನೆಗಳ ಕಾಮಗಾರಿಗೆ ತೊಂದರೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap