‘ಟಾಕ್ಸಿಕ್’ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ….!

ಬೆಂಗಳೂರು:

    ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ.

   ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದಿದ್ದಾರೆ.

Recent Articles

spot_img

Related Stories

Share via
Copy link