ಟ್ರಾಕ್ಟರ್‌ ಸಂಚಾರ ನಿಷೇಧ :ಚಾಲಕರು ಮತ್ತು ಮಾಲೀಕರು ಪ್ರತಿಭಟನೆ

ಬೆಂಗಳೂರು: 

    ಬೆಂಗಳೂರು ನಗರದಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಟ್ರಾಕ್ಟರ್ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ.

    ನಗರದಲ್ಲಿ ಟ್ರಾಕ್ಟರ್ ಸಂಚಾರವನ್ನು ನಿಷೇಧಿಸಿರುವ ಬೆಂಗಳೂರು ಟ್ರಾಫಿಕ್ ಪೊಲೀಸರ ಕ್ರಮವನ್ನು ವಿರೋಧಿಸಿ ಸುಮಾರು 3,000 ಟ್ರ್ಯಾಕ್ಟರ್ ಮಾಲೀಕರು ಮತ್ತು ಕಾರ್ಮಿಕರು ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ನಗರದಲ್ಲಿ 35,000 ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಿದ್ದು, ಈ ನಿರ್ಬಂಧದಿಂದ ಸುಮಾರು ಎರಡು ಲಕ್ಷ ಕಾರ್ಮಿಕರು ತೊಂದರೆಗೀಡಾಗಿದ್ದಾರೆ ಎಂದು ಟ್ರ್ಯಾಕ್ಟರ್ ಮಾಲೀಕರ ಸಂಘ ತಿಳಿಸಿದೆ. 

    ಟ್ರಾಕ್ಟರ್‍ಗಳ ಸಮೇತ ಫ್ರೀಡಂ ಪಾರ್ಕ್‍ಗೆ ಆಗಮಿಸಿದ ನೂರಾರು ಟ್ರಾಕ್ಟರ್ ಚಾಲಕರು ಹಾಗೂ ಮಾಲೀಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರದ ಈ ನಿರ್ಧಾರ ಖಂಡಿಸಿ ಕಳೆದ ರಾತ್ರಿಯೇ ರಾಜ್ಯದ ನಾನಾ ಮೂಲೆಗಳಿಂದ ನೂರಾರು ಟ್ರಾಕ್ಟರ್‍ಗಳು ನಗರ ಪ್ರವೇಶಿಸಲು ಮುಂದಾದವು . ಆದರೆ, ಪೊಲೀಸರು ಟ್ರಾಕ್ಟರ್‍ಗಳ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಚಾಲಕರು ಸ್ಥಳದಲ್ಲೇ ಟ್ರಾಕ್ಟರ್ ನಿಲ್ಲಿಸಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು. 

    ಟ್ರಾಕ್ಟರ್ ಚಾಲಕರ ಪ್ರತಿಭಟನೆಯಿಂದ ಬೆಚ್ಚಿಬಿದ್ದ ಪೊಲೀಸರು ಕೊನೆಗೂ ಟ್ರಾಕ್ಟರ್‍ಗಳನ್ನು ಫ್ರೀಡಂ ಪಾರ್ಕ್‍ವರೆಗೆ ತೆಗೆದುಕೊಂಡು ಹೋಗಿ ನಿಲ್ಲಿಸಲು ಅನುಮತಿ ನೀಡಬೇಕಾಯಿತು. ಕರ್ನಾಟಕ ಸೇನೆ ರಾಜ್ಯಧ್ಯಕ್ಷ ಬಸವರಾಜ್ ಪಡುಕೋಟಿ ನೇತೃತ್ವದಲ್ಲಿ ನೂರಾರು ಮಂದಿ ಇಂದು ಫ್ರೀಡಂಪಾರ್ಕ್ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

    ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರಕ್ಕೆ ನಿಷೇಧ ವಿಧಿಸಿದರೆ 40 ಸಾವಿರಕ್ಕೂ ಹೆಚ್ಚಿರುವ ಟ್ರಾಕ್ಟರ್‍ಗಳು, ಮಾಲೀಕರು, ಚಾಲಕರು ಹಾಗೂ ಕಟ್ಟಡ ಕಾರ್ಮಿಕರು ಬೀದಿಪಾಲಾಗಲಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು. ಟ್ರಾಕ್ಟರ್ ಚಾಲಕರ ಈ ಹೋರಾಟಕ್ಕೆ ಬಿಗ್‍ಬಾಸ್ ಖ್ಯಾತಿಯ ರೂಪೇಶ್ ರಾಜಣ್ಣ, ಹರೀಶ್ ಬೈರಪ್ಪ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ.

   ಸುಮಾರು ಒಂದು ತಿಂಗಳ ಹಿಂದೆ, ಸಂಚಾರ ಪೊಲೀಸರು ನಗರದಲ್ಲಿ ಟ್ರ್ಯಾಕ್ಟರ್‌ಗಳ ಸಂಚಾರ ವನ್ನು ನಿಷೇಧಿಸಿದರು. “ನಾವು ಕಸ ಸಂಗ್ರಹಣೆ, ಚರಂಡಿಗಳಿಂದ ಹೂಳು ಎತ್ತುವುದು ಮತ್ತು ಹಾಲೊ ಇಟ್ಟಿಗೆಗಳು, ಮರಳು, ಲೋಹದ ಸರಳುಗಳು ಮತ್ತು ಇತರ ನಿರ್ಮಾಣ ಸಾಮಗ್ರಿಗಳನ್ನು ಸ್ಥಳಾಂತರಿ ಸುವಲ್ಲಿ ತೊಡಗಿಸಿಕೊಂಡಿದ್ದೇವೆ. ಪೊಲೀಸರ ಕ್ರಮದಿಂದ ಟ್ರ್ಯಾಕ್ಟರ್ ಮಾಲೀಕರು ಮತ್ತು ಇದನ್ನು ಅವಲಂಬಿಸಿರುವ ಸುಮಾರು 2 ಲಕ್ಷ ಕಾರ್ಮಿಕರಿಗೆ ಏನಾಗುತ್ತದೆ? ಸಂಚಾರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಸಂಚಾರ ಪೊಲೀಸರು ಟ್ರ್ಯಾಕ್ಟರ್‌ಗಳನ್ನು ನಿರ್ಬಂಧಿಸಿದ್ದಾರೆ’ ಎಂದು ಬೆಂಗಳೂರು ಟ್ರ್ಯಾಕ್ಟರ್ ಮಾಲೀಕರ ಸಂಘ, ಬೆಂಗಳೂರು ಕಟ್ಟಡ ಕಾರ್ಮಿಕರ ಸಂಘ ಹಾಗೂ ಇತರರ ಸಹಯೋಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ನಮ್ಮ ಕರ್ನಾಟಕ ಸೇನೆಯ ಅಧ್ಯಕ್ಷ ಬಸವರಾಜು ಪಡುಕೋಟೆ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap