ಕುಮಾರಸ್ವಾಮಿ ಹಿಟ್ ಅಂಡ್ ರನ್ ಕೇಸು: ಕುಮಾರಸ್ವಾಮಿಯವರು ಯಾವಾಗಲೂ ಹಿಟ್ ಅಂಡ್ ರನ್ ಕೇಸು, ಅವರು ಇದುವರೆಗೆ ಮಾಡಿರುವ ಆರೋಪಗಳನ್ನು ತಾತ್ವಿಕವಾಗಿ ಕೊನೆಯವರೆಗೆ ತೆಗೆದುಕೊಂಡು ಹೋಗಿದ್ದಾರೆಯೇ, ಸರಿಯಾದ ಸಮಯಕ್ಕೆ ದಾಖಲೆ ಬಿಡುಗಡೆ ಮಾಡಲಿ ನೋಡೋಣ, ನಾವು ಆಗ ಉತ್ತರ ಕೊಡುತ್ತೇವೆ ಎಂದರು.
ಅವರ ಕುಟುಂಬದವರೂ ರಾಜಕೀಯದಲ್ಲಿ ಇದ್ದಾರೆ: ಪುತ್ರ ಯತೀಂದ್ರ ಮನೆಯಲ್ಲಿ ಇರುತ್ತಾರೆ, ಅವರು ಮಾಜಿ ಶಾಸಕ. ಹೆಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಅವರ ಪುತ್ರ ಇರುತ್ತಾರೆ ಹೆಚ್. ಡಿ ಕುಮಾರಸ್ವಾಮಿ ಅಣ್ಣ ಸಚಿವರು ಆಗಿದ್ದರು, ಅವರ ತಂದೆ ಪಿಎಂ ಆಗಿದ್ದವರು. ಅಣ್ಣ, ಮಕ್ಕಳು ಶಾಸಕರು ಆಗಿದ್ದರು, ಏನಂತ ಕರೆಯಬೇಕು. ನಾನು ಇದಕ್ಕೆಲ್ಲಾ ಅಧಿವೇಶನದಲ್ಲೇ ಉತ್ತರ ಕೊಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.
ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಕುರಿತು ವರದಿ ಕೇಳುತ್ತೇನೆ: ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯಿಸಿದ ಸಿಎಂ, ಈ ವಿಚಾರದ ಬಗ್ಗೆ ವಿವರ ಗೊತ್ತಿಲ್ಲ, ತಿಳಿದುಕೊಂಡು ಹೇಳುತ್ತೇನೆ ಎಂದರು.
ಜಗದೀಶ್ ಅವರ ಪತ್ನಿ ಪಂಚಾಯತ್ ಸದಸ್ಯೆ, ಇದರಲ್ಲಿ ರಾಜಕೀಯ ಇರಬಹುದು ಎಂದು ನನಗೆ ಅನಿಸುತ್ತದೆ, ಅವರನ್ನು ವರ್ಗಾವಣೆ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದು, ವರ್ಗಾವಣೆಗೆ ಆತ್ಮಹತ್ಯೆ ಯತ್ನಕ್ಕೆ ಸಚಿವ ಚಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿಯವರು ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿದೆ ಎಂದು ನನಗನಿಸುವುದಿಲ್ಲ.
ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದರು.ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸೂಕ್ತ ಸಮಯದಲ್ಲಿ ಪೆನ್ ಡ್ರೈವ್ ನಲ್ಲಿರುವ ದಾಖಲೆ ಬಿಡುಗಡೆ ಮಾಡುತ್ತೇನೆ. ಈ ಸರ್ಕಾರ ಏನು ಮಾತನಾಡುತ್ತದೆಯೋ ಎಲ್ಲವನ್ನು ಮಾತನಾಡಲಿ. ನನ್ನನ್ನು ಹಿಟ್ ಅಂಡ್ ರನ್ ಎಂದು ಹೇಳಿಕೊಳ್ಳಲಿ. ನನಗೆ ಪೆನ್ ಡ್ರೈವ್ ಬಿಡುಗಡೆ ಮಾಡುವ ಅವಸರವಿಲ್ಲ, ಸಮಯ ಬಂದಾಗ ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಪೆನ್ ಡ್ರೈವ್ ಮಾಹಿತಿ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವರ್ಗಾವಣೆ ದಂಧೆ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.