ಚುನಾವಣೆ ಗೆಲ್ಲಲ್ಲು ಹಿಂದೂ ಟ್ರಂಪ್‌ ಕಾರ್ಡ್‌ ಬಳಸಲು ಮುಂದಾದ ಟ್ರಂಪ್

ವಾಷಿಂಗ್ಟನ್

   ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ತಮ್ಮ ಪ್ರತಿಸ್ಪರ್ಧಿಯಾಗಿರುವ ಕಮಲಾ ಹ್ಯಾರಿಸ್ ವಿರುದ್ಧ ವಾಗ್ದಾಳಿ ನಡೆಸಲು ಹಿಂದೂ ಪರ ತಂತ್ರವನ್ನು ಬಳಸಿದ್ದಾರೆ. ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಪ್ರಪಂಚದಾದ್ಯಂತ ಹಿಂದೂಗಳನ್ನು ಕಡೆಗಣಿಸಿದ್ದಾರೆ. ಹಿಂದೂ ಅಮೆರಿಕನ್ನರತ್ತ ಗಮನ ಹರಿಸಲು ವಿಫಲರಾಗಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

   ಈ ಹಿನ್ನೆಲೆಯಲ್ಲಿ ಹಿಂದೂ ಅಮೆರಿಕನ್ನರನ್ನು ಧಾರ್ಮಿಕ ವಿರೋಧಿ ಅಜೆಂಡಾಗಳಿಂದ ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿರುವ ಟ್ರಂಪ್ ಮುಂಬರುವ ಚುನಾವಣೆಯಲ್ಲಿ ಗೆದ್ದರೆ ತಮ್ಮ “ಉತ್ತಮ ಸ್ನೇಹಿತ” ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಯುಎಸ್-ಭಾರತ ಸಂಬಂಧವನ್ನು ಬಲಪಡಿಸುವುದಾಗಿ ಭರವಸೆ ನೀಡಿದರು. “ನಾವು ನಿಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತೇವೆ. ನನ್ನ ಅಧಿಕಾರದಲ್ಲಿ ಆಡಳಿತ ಉತ್ತಮವಾಗಿರುತ್ತದೆ. ನಾವು ಭಾರತ ಮತ್ತು ನನ್ನ ಉತ್ತಮ ಸ್ನೇಹಿತ ಪ್ರಧಾನಿ ಮೋದಿಯವರೊಂದಿಗೆ ನಮ್ಮ ಉತ್ತಮ ಪಾಲುದಾರಿಕೆಯನ್ನು ಬಲಪಡಿಸುತ್ತೇವೆ ಎಂದು ಟ್ರಂಪ್ ಹೇಳಿದ್ದಾರೆ.

   “ಬಾಂಗ್ಲಾದೇಶದಲ್ಲಿ ಜನಸಮೂಹದಿಂದ ದಾಳಿ ಮತ್ತು ಲೂಟಿಗೆ ಒಳಗಾಗುತ್ತಿರುವ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಅನಾಗರಿಕ ಹಿಂಸಾಚಾರವನ್ನು ನಾನು ಬಲವಾಗಿ ಖಂಡಿಸುತ್ತೇನೆ, ಇದು ಒಟ್ಟಾರೆ ಅವ್ಯವಸ್ಥೆಯ ಸ್ಥಿತಿಯಲ್ಲಿಯೇ ಉಳಿದಿದೆ” ಎಂದು ಮುಂಬರುವ ನವೆಂಬರ್ 5 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.  

   ಟ್ರಂಪ್ ತಾವು ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2017 ರಿಂದ 2020 ರವರೆಗೆ ಸತತ ನಾಲ್ಕು ವರ್ಷಗಳ ಕಾಲ ಶ್ವೇತಭವನದಲ್ಲಿ ದೀಪಾವಳಿಯನ್ನು ಆಚರಿಸಿದರು. ಮಾಜಿ ಪ್ರಥಮ ಮಹಿಳೆ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ಮತ್ತು ಮಗಳು ಇವಾಂಕಾ ಟ್ರಂಪ್ ಕೂಡ ಅವರೊಂದಿಗೆ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

Recent Articles

spot_img

Related Stories

Share via
Copy link