ಬೆಂಗಳೂರು:

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ತುಳಸಿ ಮುನಿರಾಜು ಅವರು ಇಂದು ನಾಮಪತ್ರ ಸಲ್ಲಿಸಿದರು.
ವಿಧಾನ ಸೌಧದ ಪಶ್ಚಿಮ ದ್ವಾರಕ್ಕೆ ನಮಸ್ಕರಿಸಿ, ವಿಧಾನ ಸೌಧಕ್ಕೆ ಭೇಟಿ ಕೊಟ್ಟ ತುಳಸಿ ಮುನಿರಾಜು ಗೌಡ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾದ್ಯಕ್ಷ್ಯ ನಳೀನ್ ಕುಮಾರ್ ಕಟೀಲ್, ಸಚಿವ ಅಶೋಕ್ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಮುನಿರಾಜು ಗೌಡ ಪಕ್ಷದ ತಳಮಟ್ಟದ ಕಾರ್ಯಕರ್ತ. ಯುವ ಮೋರ್ಚಾ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಲೋಕಸಭಾ, ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದವರು ಹಾಲಿ ರಾಜ್ಯ ಕಾರ್ಯದರ್ಶಿಗಳಾಗಿದ್ದಾರೆ. ಅವರನ್ನು ಪಕ್ಷ ಈಗ ಗುರುತಿಸಿ ಸರ್ವಸಮ್ಮತದ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








