ತುಮಕೂರು :
ತುಮಕೂರು ವಿಶ್ವವಿದ್ಯಾನಿಲಯದ 14ನೇ ವಾರ್ಷಿಕ ಘಟಿಕೋತ್ಸವವು ಮಾರ್ಚ್ 5ರ ಬೆಳಿಗ್ಗೆ 11 ಗಂಟೆಗೆ ಶ್ರೀ ಶ್ರೀ ಶ್ರೀ ಡಾ: ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ನಡೆಯಲಿದೆ.
ಗೌರವಾನ್ವಿತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ವಜುಭಾಯಿ ವಾಲಾ ಅಧ್ಯಕ್ಷತೆವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಉನ್ನತಶಿಕ್ಷಣ, ಐಟಿಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ ಉಪಸ್ಥಿತರಿರುವರು.
ರಾಜಸ್ಥಾನ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಇಸ್ರೋ ಭಾರತ ಸರ್ಕಾರ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ಕರ್ನಾಟಕ ಜ್ಞಾನ ಆಯೋಗದ ವಿಶ್ರಾಂತ ಅಧ್ಯಕ್ಷ ಡಾ: ಕೃಷ್ಣಸ್ವಾಮಿ ಕಸ್ತೂರಿರಂಗನ್ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡುವರು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್(ಪ್ರೊ.) ವೈ.ಎಸ್. ಸಿದ್ದೇಗೌಡ ವಾರ್ಷಿಕ ವರದಿ ಮಂಡಿಸುವರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
