ತುಮಕೂರು : ಮಾ.29 ರಂದು ವಿವಿಧ ಗ್ರಾಪಂಗಳಲ್ಲಿ ಉಪಚುನಾವಣೆ

 ತುಮಕೂರು :

      ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ಹಾಗೂ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಉಳಿದಿರುವ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಮಾರ್ಚ್ 29 ರಂದು ಉಪಚುನಾವಣಾ ಮತದಾನ ನಡೆಯಲಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಚುನಾವಣಾ ವೇಳಾಪಟ್ಟಿ ಹೊರಡಿಸಿದ್ದಾರೆ.

ಚುನಾವಣಾ ವೇಳಾಪಟ್ಟಿ:-

       ಪಾವಗಡ ತಾಲೂಕು ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ಹಾಗೂ ಗುಬ್ಬಿ, ತಿಪಟೂರು, ಶಿರಾ, ತುರುವೇಕೆರೆ, ಪಾವಗಡ ಮತ್ತು ಮಧುಗಿರಿ ತಾಲೂಕುಗಳಲ್ಲಿ ನಾನಾ ಕಾರಣಗಳಿಂದ ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಮಾ.19ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಮಾ.20ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮಾ.22ರಂದು ಕೊನೆಯ ದಿನವಾಗಿದೆ. ಮಾ.29ರಂದು ಚುನಾವಣಾ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಮಾ.30ರಂದು ಮರು ಮತದಾನ ನಡೆಯಲಿದೆ. ಮಾ.31ರಂದು ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.

     ಪಾವಗಡ ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯ ಎಲ್ಲಾ ಕ್ಷೇತ್ರಗಳ ಒಟ್ಟು 32 ಮತ್ತು ನಾಗಲಮಡಿಕೆ ತಿಮ್ಮಮ್ಮನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನಕ್ಕೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಗುಬ್ಬಿ ತಾಲೂಕಿನ ಮಂಚಲದೊರೆ ಗ್ರಾಮ ಪಂಚಾಯಿತಿಯ 8 ಕ್ಷೇತ್ರಗಳ 15 ಸ್ಥಾನ, ಅಂಕಸಂದ್ರ ಗ್ರಾ.ಪಂ 10 ಕ್ಷೇತ್ರಗಳ 21 ಸ್ಥಾನ, ಹಾಗಲವಾಡಿ ಗ್ರಾ.ಪಂ ಶಿವರಾಂಪುರ ಕ್ಷೇತ್ರದ 1ಸ್ಥಾನ, ತಿಪಟೂರು ತಾಲೂಕಿನ ಹೊನ್ನವಳ್ಳಿ ಗ್ರಾ.ಪಂನ 6 ಕ್ಷೇತ್ರಗಳ 14 ಸ್ಥಾನ, ಶಿರಾ ತಾಲೂಕಿನ ಗೋಪಾಲದೇವರಹಳ್ಳಿ ಗ್ರಾ.ಪಂನ 9 ಕ್ಷೇತ್ರಗಳ 16 ಸ್ಥಾನ, ತುರುವೇಕೆರೆ ತಾಲೂಕಿನ ವಡನಘಟ್ಟ ಗ್ರಾ.ಪಂ ಮುಗಳೂರು ಕ್ಷೇತ್ರದ 1 ಸ್ಥಾನ ಹಾಗೂ ಮಧುಗಿರಿ ತಾಲೂಕಿನ ಸಿದ್ಧಾಪುರ ಗಾ.್ರಪಂ ಮರಿತಿಮ್ಮನಹಳ್ಳಿ ಕ್ಷೇತ್ರದ 1 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿಯ ಯಾವುದೇ ಕ್ಷೇತ್ರದಲ್ಲಿ ನಾಮಪತ್ರ ಸ್ವೀಕೃತವಾಗದೇ ಚುನಾವಣೆ ಪ್ರಕ್ರಿಯೆ ಮುಂದುವರೆಯಲಾಗದೆ ಇರುವಂತಹ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ/ನಾಮಪತ್ರ ಹಿಂತೆಗೆತ ಇತ್ಯಾದಿ ಕಾರಣಗಳಿಂದ ಯಾವುದೇ ಅಭ್ಯರ್ಥಿಯು ಕಣದಲ್ಲಿರದೆ ಆ ಗ್ರಾಮ ಪಂಚಾಯಿತಿಯ ಯಾವುದೇ ಸ್ಥಾನಕ್ಕೂ ಚುನಾವಣೆ ನಡೆಯದೇ ಇದ್ದಲ್ಲಿ ಅಥವಾ ಗ್ರಾಮ ಪಂಚಾಯತಿಯಲ್ಲಿನ ಚುನಾವಣೆ ಘೋಷಿಸಿರುವ ಎಲ್ಲಾ ಸ್ಥಾನಗಳೂ ಅವಿರೋಧವಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಯ ಫಲಿತಾಂಶವನ್ನು ಚುನಾವಣಾಧಿಕಾರಿಯು ಘೋಷಿಸಿದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದ ನಿಂತು ಹೋಗುತ್ತದೆ.

      ನೀತಿ ಸಂಹಿತಿಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ “ಮತದಾನವು ಮುಕ್ತಾಯಗೊಳ್ಳುವ ನಲವತ್ತೆಂಟು ಗಂಟೆಗಳ ಮೊದಲಿನ ಅವಧಿಯಲ್ಲಿ” ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚಲಾಗುವುದು. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆ ಮುಕ್ತಾಯವಾಗುವವರೆಗೆ ಅಂತಹವರನ್ನು ಕಸ್ಟಡಿಯಲ್ಲಿ ಇಡಲಾಗುವುದು. ಚುನಾವಣೆ ಕಾಲದಲ್ಲಿ ಭ್ರಷ್ಟಾಚಾರಗಳನ್ನು ತಡೆಗಟ್ಟುವ ಬಗ್ಗೆ ಸೂಕ್ತ ತಂಡವನ್ನು ರಚಿಸಿ ಕ್ರಮ ಕೈಗೊಳ್ಳಲಾಗುವುದು.

      ಚುನಾವಣಾ ನಡೆಯಲಿರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮಾರ್ಚ್ 15 ರಿಂದ ಮಾರ್ಚ್ 31 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap