ತುಮಕೂರು :
ಜಿಲ್ಲೆಯಲ್ಲಿ ಕೈಗಾರಿಕೆಗಳ ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಯನ್ನು ನಿರುದ್ಯೋಗಿ ಯುವಕ/ ಯುವತಿಯರಿಗೆ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಂತರ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 18 ರಿಂದ 35 ವರ್ಷ ವಯಸ್ಸಿನ ಯುವ ಜನತೆಯ ಕೌಶಲ್ಯ/ಉದ್ಯೋಗದ ಅವಶ್ಯಕತೆಗಳನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿರುವ ತರಬೇತಿ ಕೇಂದ್ರಗಳು ಕೈಗಾರಿಕೆಗಳು ಐಚ್ಛಿಸುವ ಮಟ್ಟದ ಕೌಶಲ್ಯ ತರಬೇತಿಯನ್ನು ನಿರುದ್ಯೋಗಿಗಳಿಗೆ ನೀಡಬೇಕು. ಅಲ್ಲದೆ ಬೇಡಿಕೆ ಆಧಾರಿತ ತರಬೇತಿಯನ್ನು ನೀಡಬೇಕು ಎಂದು ಅವರು ಹೇಳಿದರು
ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ನೀಡುತ್ತಿರುವ 10,000 ರೂ.ಗಳ ಕಿರು ಸಾಲದ ಬಗ್ಗೆ ಪ್ರಗತಿ ಪರಿಶೀಲಿಸಿದ ಅವರು ನಿಗಧಿಪಡಿಸಿರುವ 6138 ಫಲಾನುಭವಿಗಳ ಪೈಕಿ 5151 ಮಂದಿಗೆ ಸಾಲ ಮಂಜೂರಾಗಿದ್ದು, 4939 ಬೀದಿ ಬದಿ ವ್ಯಾಪಾರಸ್ಥರಿಗೆ ಮಾತ್ರ ಹಣ ಬಿಡುಗಡೆ ಮಾಡಲಾಗಿದೆ. ಕೂಡಲೇ ನಿಗಧಿತ ಗುರಿಯನ್ನು ಸಾಧಿಸಬೇಕೆಂದು ಅವರು ಸೂಚನೆ ನೀಡಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮಾತನಾಡಿ ಕೌಶಲ್ಯ ಹೊಂದಿದ ಯುವಜನತೆಯನ್ನು ಗುರುತಿಸಲು ಗೂಗಲ್ ಲಿಂಕ್ (hಣಣಠಿs://ಜಿoಡಿms.gಟe/ರಿg5S2ಡಿSಃmmqeಖಒಖಿo6) ಅನ್ನು ಸಿದ್ಧಪಡಿಸಲಾಗಿದ್ದು, ಲಿಂಕ್ ಬಗ್ಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ, ಶಿಕ್ಷಣ ಸಂಸ್ಥೆಗಳು ಹಾಗೂ ಎಲ್ಲ ಸರ್ಕಾರಿ ಕಚೇರಿಗಳಿಗೆ ಮಾಹಿತಿ ನೀಡಲಾಗಿದೆ. ಅವರ ವ್ಯಾಪ್ತಿಯ ಅಭ್ಯರ್ಥಿಗಳ ಮಾಹಿತಿಯನ್ನು ಸಂಗ್ರಹಿಸಿ ಒದಗಿಸಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ತರಬೇತಿ ನೀಡುವ ಸಂಸ್ಥೆಗಳು ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಮಾನ್ಯತೆ ಪಡೆದು ತರಬೇತಿ ನಡೆಸಬೇಕು. ತಿಪಟೂರು ಪಟ್ಟಣದಲ್ಲಿ ನಿರಾಶ್ರಿತರ ಬಗ್ಗೆ ರ್ಯಾಪಿಡ್ ಸರ್ವೇ ಮಾಡಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಾರಾಯಣಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸುರೇಶ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರಮೇಶ್, ನಗರ ಯೋಜನಾ ನಿರ್ದೇಶಕಿ ಶುಭಾ, ಜಿ.ಪಂ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುಬ್ರನಾಯ್ಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ತರಬೇತಿ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ