ತುಮಕೂರು : ಕೋವಿಡ್-19 ತಡೆಗಟ್ಟಲು ನೋಡಲ್ ಅಧಿಕಾರಿಗಳ ನೇಮಕ

  ತುಮಕೂರು :

      ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಹಾಗೂ ಕೋವಿಡ್-19 ಕಾರ್ಯಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಕಾರ್ಯಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ.

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಹಾಗೂ ಜಿಲ್ಲಾಸ್ಪತ್ರೆಯ ಡಾ|| ವಿದ್ಯಾ, ಡಾ|| ರುಕ್ಮಿಣಿ, ತಿಪಟೂರು ಎಎಂಓ ಡಾ|| ಪ್ರಹ್ಲಾದ್ ಅವರನ್ನು ತುಮಕೂರು ಮತ್ತು ತಿಪಟೂರು ಕೋವಿಡ್-19 ಪ್ರಯೋಗಾಲಯಗಳ ನಿರ್ವಹಣೆಗೆ ನೇಮಿಸಲಾಗಿದೆ.

      ಅದರಂತೆ ಅಪರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರನ್ನು ಮಾನವ ಸಂಪನ್ಮೂಲ ಮತ್ತು ಅಗತ್ಯ ಸಾಮಗ್ರಿಗಳ ಪೂರೈಕೆಗೆ, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ವೈದ್ಯಾಧಿಕಾರಿಗಳು, ತಾಲೂಕುಗಳ ಆಡಳಿತ ವೈದ್ಯಾಧಿಕಾರಿಗಳನ್ನು ಸಂಪರ್ಕ ಪತ್ತೆ ಹಚ್ಚುವಿಕೆಗೆ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ-2 ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕರು, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ವೈದ್ಯಾಧಿಕಾರಿಗಳು, ತಾಲೂಕುಗಳ ಆಡಳಿತ ವೈದ್ಯಾಧಿಕಾರಿಗಳನ್ನು ಹೋಂ ಐಸೋಲೇಶನ್ ಮತ್ತು ಹೋಂ ಕ್ವಾರೆಂಟೈನ್ ಕಾರ್ಯಕ್ಕೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳನ್ನು ಕಂಟ್ರೋಲ್ ರೂಂ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಎಸ್‍ಎಆರ್‍ಐ/ಐಎಲ್‍ಐ ಪ್ರಕರಣಗಳ ಪತ್ತೆ ಹಚ್ಚುವಿಕೆ ಕಾರ್ಯಕ್ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರನ್ನು ಐಇಸಿ ಕಾರ್ಯಚಟುವಟಿಕೆಗೆ, ಆರ್‍ಸಿಹೆಚ್‍ಓ ಅವರನ್ನು ಕೋವಿಡ್-19 ಲಸಿಕರಣ ಕಾರ್ಯಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ-2, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಮಹಾನಗರಪಾಲಿಕೆ ಆಯುಕ್ತರು, ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳನ್ನು ಸ್ವ್ಯಾಬ್ ಸಂಗ್ರಹಕ್ಕೆ, ಸಹಾಯಕ ಔಷಧಿ ನಿಯಂತ್ರಕರನ್ನು ಔಷಧಾಲಯದಿಂದ ಮಾಹಿತಿ ಸಂಗ್ರಹಕ್ಕೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರನ್ನು ಆರೋಗ್ಯ ಸಮೀಕ್ಷೆ ಕಾರ್ಯಕ್ಕೆ ನೋಡಲ್ ಅಧಿಕಾರಿಗಳಾಗಿ ನೇಮಕವಾಗಿದ್ದಾರೆ.

      ನೋಡಲ್ ಅಧಿಕಾರಿಗಳಾಗಿ ನೇಮಕವಾಗಿರುವ ಎಲ್ಲಾ ಅಧಿಕಾರಿಗಳು ಈಗಾಗಲೇ ತಾಲೂಕುವಾರು ನಿಯೋಜನೆವಾಗಿರುವ ನೋಡಲ್ ಅಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸಿ, ಪ್ರತಿನಿತ್ಯದ ಮಾಹಿತಿಯನ್ನು ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap