ತುಮಕೂರು : ಶೇಕಡವಾರು ಸೋಂಕಿನ ಪ್ರಮಾಣದಲ್ಲಿ ಇಳಿಕೆ

  ತುಮಕೂರು : 

      ಜಿಲ್ಲೆಯಲ್ಲಿ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಶೇಕಡವಾರು ಪಾಸಿಟಿವ್ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದೆ. ಎರಡನೇ ಅಲೆ ಆರಂಭದಲ್ಲಿ ಶೇ.45ರಷ್ಟಿದ್ದ ಪಾಸಿಟಿವ್ ಪ್ರಮಾಣ ಶೇ. 40ಕ್ಕೆ ತಗ್ಗಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

      ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವ್ಯಾಪಕವಾಗಿ ಹರಡುತ್ತಿದ್ದ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತದಿಂದ ಹಾಸಿಗೆ, ಆಮ್ಲಜನಕ ಹಾಗೂ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಸರ್ಕಾರದ ಮಾರ್ಗಸೂಚಿ ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಎಲ್ಲಾ ರೀತಿಯಲ್ಲಿಯೂ ಕ್ರಮ ಕೈಗೊಂಡ ಪರಿಣಾಮ ಕೋವಿಡ್ ನಿಯಂತ್ರಣದಲ್ಲಿ ಸುಧಾರಣೆ ಕಂಡು ಬಂದಿದೆ. ಸೋಂಕಿತರ ಚೇತರಿಕೆ ಪ್ರಮಾಣವೂ ಏರಿಕೆಯಾಗುತ್ತಿದೆ ಎಂದರು.

ಲಾಕ್‍ಡೌನ್‍ಗೂ ಮುನ್ನ ಬೆಂಗಳೂರು-ತುಮಕೂರು ಓಡಾಡುವವರ ಸಂಖ್ಯೆ ಹೆಚ್ಚಿದ್ದ ಕಾರಣ ಜಿಲ್ಲೆಯಲ್ಲಿ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗಿತ್ತು. ಪ್ರಸ್ತುತ ಅಂತರ್ ಜಿಲ್ಲಾ ಸಂಚಾರ ನಿರ್ಬಂಧ ಸೋಂಕಿನ ಪ್ರಮಾಣ ತಗ್ಗಲು ನೆರವಾಗಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ 18749 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇವರಲ್ಲಿ 8812 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು ಹಾಗು 69 ಸೋಂಕಿತರು ಸಾವನ್ನಪ್ಪಿದರು. ಅದೇ ರೀತಿ ಮೇ 1ರಿಂದ 12ರವರೆಗೆ 26790 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, 12650 ಸೋಂಕಿತರು ಬಿಡುಗಡೆಯಾಗಿದ್ದಾರೆ ಹಾಗೂ 162 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

      ಅಕ್ಸಿಜನ್ ಸಮಸ್ಯೆಯಾಗದಂತೆ ಕ್ರಮ: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಆಮ್ಲಜನಕದ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ 1000 ಕೆಎಲ್ ಸಾಮರ್ಥ್ಯದ ಘಟಕ ಸ್ಥಾಪನೆ ಅಡಿಪಾಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಇದಲ್ಲದೆ 110 ಆಮ್ಲಜನಕ ಸಾಂದ್ರಕಗಳ ಮೂಲಕವೂ ಸೋಂಕಿತರಿಗೆ ಆಮ್ಲಜನಕ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೈಗಾರಿಕೋದ್ಯಮಿಗಳಿಂದ 250 ಆಮ್ಲಜನಕ ಸಾಂದ್ರಕಗಳ ನೆರವು ಸಿಗಲಿದೆ. ಈ ಆಮ್ಲಜನಕ ಸಾಂದ್ರಕಗಳನ್ನು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಿಗೂ ನೀಡಿ ಸೋಂಕಿತರಿಗೆ ಸಮಸ್ಯೆಯಾಗದಂತೆ ಆಮ್ಲಜನಕ ಪೂರೈಕೆ ಮಾಡಲಾಗುವುದು. ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿಯೂ ಉತ್ತಮ ಕಾರ್ಯ ನಡೆಯುತ್ತಿದೆ. ಇದರಿಂದ ಜಿಲ್ಲಾಸ್ಪತ್ರೆ ಮೇಲಿನ ಒತ್ತಡ ತಗ್ಗಿದೆ. ಜಿಲ್ಲೆಗೆ 29ಕೆಎಲ್ ಆಮ್ಲಜನಕಕ್ಕೆ ಬೇಡಿಕೆಯನ್ನು ಸರಕಾರದ ಮುಂದಿಟ್ಟಿದ್ದು, 23ಕೆಎಲ್ ಆಮ್ಲಜನಕ ಹಂಚಿಕೆಯಾಗಿದ್ದು, ಅಗತ್ಯಕ್ಕನುಗುಣವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಗೆ ಮಾಡಲಾಗುವುದು ಎಂದು ತಿಳಿಸಿದರು.

      ಕೋವಿಡ್ ಪರೀಕ್ಷೆ ಸುಸೂತ್ರ: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ತುಮಕೂರು ಹಾಗೂ ತಿಪಟೂರಿನಲ್ಲಿ ಲ್ಯಾಬ್‍ಗಳಿದ್ದು, ತುಮಕೂರಿನ ಲ್ಯಾಬ್‍ನಲ್ಲಿ ಸುಮಾರು ಎರಡೂವರೆ ಸಾವಿರ ಮತ್ತು ತಿಪಟೂರು ಲ್ಯಾಬ್‍ನಲ್ಲಿ ಒಂದೂವರೆ ಸಾವಿರ ಪರೀಕ್ಷೆ ಮಾಡಲಾಗುತ್ತಿದೆ. ಇದಲ್ಲದೆ ಶಿರಾದಲ್ಲೂ ದಿನಕ್ಕೆ ಸಾವಿರ ಪರೀಕ್ಷೆ ನಡೆಸುವಲ್ಯಾಬ್ ತೆರೆಯಲು ಯೋಜನೆ ರೂಪಿಸಲಾಗಿದ್ದು, ಶೀಘ್ರ ಪ್ರಾರಂಭವಾಗಲಿದೆ. ಈ ಲ್ಯಾಬ್‍ನಲ್ಲಿಯೂ ಒಂದು ಸಾವಿರ ಕೋವಿಡ್ ಪರೀಕ್ಷೆ ಮಾಡಬಹುದು. ಇದಲ್ಲದೆ, ಲ್ಯಾಬ್ ಆನ್ ರೋಡ್ ವಾಹನದ ಮೂಲಕವೂ ಸ್ಥಳಕ್ಕೆ ಹೋಗಿ ಟೆಸ್ಟಿಂಗ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

      15 ಸಾವಿರ ಔಷಧ ಕಿಟ್ ಹಂಚಿಕೆಗೆ ಕ್ರಮ: ಕುಟುಂಬ ಸದಸ್ಯರೆಲ್ಲರಿಗೂ ಸೋಂಕು ತಗುಲಿದ್ದರೆ ಅವರಿಗೆ ಊಟ-ತಿಂಡಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೂ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸೇವೆಗೆ ನಗರದಲ್ಲಿ 350 ಎನ್‍ಜಿಒಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ.

ಗ್ರಾಮೀಣ ಭಾಗದಲ್ಲಿ ಆಶಾ-ಅಂಗನವಾಡಿ

ಸರಕಾರಿ ಆಸ್ಪತ್ರೆಯಲ್ಲಿ ರೆಮ್ಡಿಸಿವರ್ ಕೊರತೆಯಿಲ್ಲ  :

ಆಮ್ಲಜನಕ, ರೆಮ್ಡಿಸಿವರ್ ಸೇರಿದಂತೆ ಬಹುತೇಕ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೆಮ್ಡಿಸಿವರ್ ಕೊರತೆಯಿಲ್ಲ. ಸರ್ಕಾರಿ ಆಸ್ಪತ್ರೆಯಿಂದ ರೆಫರ್ ಮಾಡಲಾದ ಸೋಂಕಿತರಿಗೂ ರೆಮ್ಡಿಸಿವರ್ ಅಭಾವವಿಲ್ಲ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಕೊಂಚ ಸಮಸ್ಯೆ ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಅದರ ನಿವಾರಣೆಗೂ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದರು.

ಮನೋಖಿನ್ನತೆಗೊಳಗಾಗಿ ಸೂರಪ್ಪ ಸಾವು :

    ಚಿಕ್ಕನಾಯಕನಹಳ್ಳಿ ಸೂರಪ್ಪ ಸಾವು. ಆಹಾರ ಸಿಗದೆ ಮೃತಪಟ್ಟಿದ್ದಲ್ಲ. ಆತನಿಗೆ ಪಡಿತರ ಕಾರ್ಡ್, ಪಿಂಚಣಿ ಎಲ್ಲವೂ ದೊರಕುತ್ತಿತ್ತು. ಮನೋವ್ಯಾಕುಲತೆಗೊಳಗಾಗಿದ್ದ ಆತ ಲಾಕ್‍ಡೌನ್ ಸಂದರ್ಭದಲ್ಲಿ ಹೋಟೆಲ್‍ಗೂ ಹೋಗಲು ಹಿಂಜರಿದಿದ್ದ. ಆತ ತೀವ್ರ ಸುಸ್ತಾದ ಮಾಹಿತಿ ತಿಳಿದು ತಹಸೀಲ್ದಾರ್ ಅವರು ಆತನನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದು, ಯಾರೂ ಹಸಿವಿನಿಂದ ಸಾಯಲು ಆಡಳಿತ ಬಿಡುವುದಿಲ್ಲ ಎಂದರು. ತುಮಕೂರು ವಿವಿ ಮಾಜಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಕರೆ ಮಾಡಿದಾಗ ಉದ್ದಟತನದ ಹೇಳಿಕೆ ನೀಡಿಲ್ಲ.

ಅವರೇ ಆಕ್ಸಿಜನ್ ಪೂರೈಕೆ ವಿಷಯವಾಗಿ ತುಂಬಾ ವಾದ ಮಾಡಿದ್ದು, ಕಡೆಗೆ ಸಿಎಂ ಕೇಳಿ ಎಂದು ಹೇಳಿದೆ. ಜೆಡಿಎಸ್ ಕಾರ್ಪೋರೇಟರ್ ಸಹ ಡಿಸಿ ಕಚೇರಿ ಸಭೆಗೆ ಬಂದು ಮೈಮೇಲೆ ಬೀಳುವಂತೆ ಆರೋಪಗಳ ಸುರಿಮಳೆಗೈಯ್ಯುತ್ತಿದ್ದರು. ಜಿಲ್ಲಾಡಳಿತ ನಾವು ಇಷ್ಟೆಲ್ಲ ಶ್ರಮ ವಹಿಸುತ್ತಿರುವಾಗ ಯಾವುದೇ ಹಂತದ ಜನಪ್ರತಿನಿಧಿಗಳು ಅವರವರ ಕರ್ತವ್ಯ ನಿರ್ವಹಿಸಬೇಕೆಂದರು.

ಮನೆ ಐಸೋಲೇಷನ್‍ಗೆ ಹಠ ಹಿಡಿಯದೆ ಕೋವಿಡ್ ಆರೈಕೆ ಕೇಂದ್ರಕ್ಕೆ ಬನ್ನಿ :

      ಕೋವಿಡ್ ಹರಡುವಿಕೆ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ, ಸೋಂಕಿತರು ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರನ್ನು ಕೇಂದ್ರಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ಸೋಂಕು ಕುಟುಂಬಕ್ಕೆ ಹಬ್ಬುವುದನ್ನು ತಡೆಯಬಹುದು. ಹಾಗಾಗಿ ಸೋಂಕಿತರು ಹೋಂ ಐಸೋಲೇಷನ್ ಬದಲಿಗೆ ಕೋವಿಡ್ ಕೇರ್‍ಗೆ ಬಂದು ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದರು.

      ಎಬಿಆರ್‍ಕೆ ಸೋಂಕಿತರು ಹಣ ಕಟ್ಟುವಂತಿಲ್ಲ: ಸರ್ಕಾರಿ ಆಸ್ಪತ್ರೆಗಳಿಂದ ರೆಫರ್ ಆಗಿ ದಾಖಲಾದ ಸೋಂಕಿತರನ್ನು ಎಬಿಆರ್ ಕೆ ಅಡಿಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಸೋಂಕಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಹಣ ಪಡೆಯುವಂತಿಲ್ಲ. ಚಿಕಿತ್ಸೆ ನೀಡಲು ಹಣ ಪಡೆದ ಬಗ್ಗೆ ದಾಖಲೆ ಸಮೇತ ಮಾಹಿತಿ ಒದಗಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

      ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಪಂ ಸಿಇಒ. ಡಾ.ಕೆ ವಿದ್ಯಾಕುಮಾರಿ, ಎಸ್ ಪಿ ಡಾ.ಕೆ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಡಿಎಚ್‍ಒ ಡಾ.ನಾಗೇಂದ್ರಪ್ಪ ಸೇರಿದಂತೆ ಇತರರಿದ್ದರು.

 ಮನೆ ಐಸೋಲೇಷನ್‍ಗೆ ಹಠ ಹಿಡಿಯದೆ ಕೋವಿಡ್ ಆರೈಕೆ ಕೇಂದ್ರಕ್ಕೆ ಬನ್ನಿ :

      ಕೋವಿಡ್ ಹರಡುವಿಕೆ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ, ಸೋಂಕಿತರು ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರನ್ನು ಕೇಂದ್ರಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ಸೋಂಕು ಕುಟುಂಬಕ್ಕೆ ಹಬ್ಬುವುದನ್ನು ತಡೆಯಬಹುದು. ಹಾಗಾಗಿ ಸೋಂಕಿತರು ಹಠ ಹಿಡಿದು ಹೋಂ ಐಸೋಲೇಷನ್‍ಗೆ ಸೀಮಿತರಾಗದೆ ಕೋವಿಡ್ ಕೇರ್‍ಗೆ ಬಂದು ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap