ತುಮಕೂರು : ಜಿಲ್ಲೆಯ ನಾಲ್ವರಿಗೆ ನಿಗಮ- ಮಂಡಳಿ ಅಧ್ಯಕ್ಷ ಸ್ಥಾನ

 ತುಮಕೂರು:

      ಹೊಸ ನಿಗಮ, ಪ್ರಾಧಿಕಾರಗಳ ರಚನೆ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿಗಮ ಮಂಡಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

      ಇದರಲ್ಲಿ ತುಮಕೂರು ಜಿಲ್ಲೆಯ ನಾಲ್ವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ದೊರೆತಿದ್ದು, ತೆಂಗು ನಾರಿನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಒಲ್ಲೆ ಎಂದಿದ್ದ ತಿಪಟೂರು ಶಾಸಕ ಬಿ.ಸಿ.ನಾಗೇಶ್ ಅವರಿಗೆ ಮಹತ್ವದ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಶಿರಾ ಉಪಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಬಿ.ಕೆ.ಮಂಜುನಾಥ್ ಅವರಿಗೆ ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ, ಎಸ್.ಆರ್.ಗೌಡರಿಗೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷಸ್ಥಾನವನ್ನು ನೀಡಲಾಗಿದೆ. ಮಾಜಿ ಶಾಸಕ ಕೆ.ಎಸ್.ಕಿರಣ್‍ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿ ಆದೇಶಿಸಲಾಗಿದೆ.

 ಕಾಡುಗೊಲ್ಲರ ನಿಗಮದ ಚರ್ಚೆ:

      ಮೂರು ದಿನಗಳ ಹಿಂದಷ್ಟೇ ಘೋಷಿಸಲಾದ ವೀರಶೈವ-ಲಿಂಗಾಯಿತ ಅಭಿವೃದ್ಧಿ ನಿಗಮಕ್ಕೆ ಬಿ.ಎಸ್.ಪರಮಶಿವಯ್ಯ ಅವರನ್ನು ಅಧ್ಯಕ್ಷರಾಗಿ ನೇಮಿಸಿರುವ ಸರಕಾರ ಇದಕ್ಕೂ ಮುಂಚೆ ಶಿರಾ ಉಪಚುನಾವಣೆ ವೇಳೆ ಘೋಷಿಸಲಾದ ಕಾಡು ಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸದಿರುವುದು ಚರ್ಚೆಗೆ ಗ್ರಾಸವೊದಗಿಸಿದೆ.

      ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಗೆ ಬರುವ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ರಘು.ಆರ್.ಕೌಟಿಲ್ಯ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಬಾಬು ಪತ್ತಾರ್, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಜಿ.ಕೆ.ಗಿರೀಶ್ ಉಪ್ಪಾರ್, ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಎಸ್.ನರೇಶ್‍ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap