ತಿಪಟೂರು :
ನಗರದ ರೈಲ್ವೆ ನಿಲ್ದಾಣದ ಬಳಿ ಸುಮಾರು 20 ವರ್ಷದ ಯುವಕನೋರ್ವ ರೈಲಿಗೆ ತಲೆಯೊಡ್ಡಿ ಮೃತಪಟ್ಟ ಘಟನೆ ನಡೆದಿದೆ.
ಬಸವೇಶ್ವರ ನಗರದ ಶಾಂತರಾಜು ಮೃತಪಟ್ಟ ಯುವಕ. ಈತ ಮೊನ್ನೆ ರಾತ್ರಿ ಸ್ನೇಹಿತನ ಹುಟ್ಟುಹಬ್ಬಕ್ಕೆ ಎಂದು ತೆರಳಿದ್ದ ಸಂದರ್ಭದಲ್ಲಿ ಸ್ನೇಹಿತರ ನಡುವೆ ಜಗಳವಾಗಿದೆ ಎಂದು ಅನುಮಾನಿಸಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ