ತುಮಕೂರು : ಹಾಟ್’ಸ್ಪಾಟ್ ಗ್ರಾಮಗಳಿಗೆ ಸಿಇಒ ಭೇಟಿ

 ತುಮಕೂರು :

     ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಶಿರಾ ತಾಲ್ಲೂಕಿನ ಹಾಟ್ಸ್ಪಾಟ್ ಗ್ರಾಮಗಳಾದ ಹನುಮಂತನಗರ, ಮಾಯಸಂದ್ರ, ಗುಳಿಗೆನಹಳ್ಳಿ ಗ್ರಾಮಗಳಲ್ಲಿ ಕೋವಿಡ್ 19 ಪ್ರಕರಣಗಳು ಧೃಡಪಟ್ಟ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು ಹಾಗೂ ಸಾರ್ವಜನಿಕರಲ್ಲಿ ಕೋವಿಡ್ ನಿಯಂತ್ರಿಸುವ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

      ಮನೆಯಿಂದ ಹೊರ ಬರುವಾಗ ಎಲ್ಲರೂ ಸಹ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ನಿಯಮಿತವಾಗಿ ಸೋಪಿನಿಂದ ತಮ್ಮ ಕೈಗಳನ್ನು ಸ್ವಚ್ಛಗೊಳಿಸಿ ಕೊಳ್ಳುವುದು, ಅನಗತ್ಯವಾಗಿ ಅಕ್ಕಪಕ್ಕದ ಮನೆಗಳಿಗೆ ಹೋಗಿ ಬರುವುದು ಅಥವಾ ಬೇರೆ ಬೇರೆ ಗ್ರಾಮಗಳಿಗೆ ಹೋಗಿ ಬರುವುದು ಮಾಡಬಾರದು. ಅನಗತ್ಯವಾಗಿ ಮನೆಯಿಂದ ಹೊರ ಬಂದು ಓಡಾಡುವುದರಿಂದ ಕೋವಿಡ್-19 ಸೋಂಕಿಗೆ ತಾವು ಸಹ ಒಳಗಾಗುವ ಸಂಭವವಿದೆ. ಆದ್ದರಿಂದ, ಕೆಲವು ದಿನಗಳ ಕಾಲ ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸುರಕ್ಷಿತವಾಗಿದ್ದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅರಿವು ಮೂಡಿಸಿದರು.

ಬಂದಕುಂಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯನ್ನು ಉದ್ದೇಶಿಸಿ ಕೋವಿಡ್-19 ನಿಯಂತ್ರಣಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಮಿತಿಯ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವುದರ ಮೂಲಕ ಕೋವಿಡ್ 19 ಸಂಪೂರ್ಣವಾಗಿ ನಿಯಂತ್ರಣ ಮಾಡುವಂತೆ ಮನವಿ ಮಾಡಿದರು. ನಂತರ ಶಿರಾ ನಗರದ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಧನಾತ್ಮಕ ಪ್ರಕರಣಗಳ ವ್ಯಕ್ತಿಗಳ ಆರೋಗ್ಯವನ್ನು ವಿಚಾರಿಸಿದರು ಹಾಗೂ ಸೆಂಟರ್ನಲ್ಲಿ ಗುಣಮಟ್ಟದ ಊಟ-ತಿಂಡಿ ದೊರೆಯುತ್ತಿರುವ ಬಗ್ಗೆ, ಸ್ವಚ್ಛತೆಯ ಬಗ್ಗೆ ಮಾಹಿತಿಯನ್ನು ಪಡೆದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link