ತುಮಕೂರು : ಸಾರ್ವಜನಿಕರಿಗೆ ಉಚಿತ ಕೊರೊನಾ ಟೆಸ್ಟ್

ತುಮಕೂರು : 

       ಜಿಲ್ಲಾಡಳಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಪುರುಷರ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರಿಗೆ ಉಚಿತ ಕೊರೋನಾ ಟೆಸ್ಟ್ ಏರ್ಪಡಿಸಿರುವುದಾಗಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಲೇಪಾಕ್ಷ್ ತಿಳಿಸಿದರು.

      ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಉಚಿತವಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊರೋನಾ ಪರೀಕ್ಷೆಯನ್ನು ಏರ್ಪಡಿಸಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

      ಕೊರೊನಾ ಪರೀಕ್ಷೆಯು ಮಂಗಳವಾರದವರೆವಿಗೂ ಮುಂದುವರಿಯಲಿದ್ದು, ಎಲ್ಲರೂ ಕೂಡ ಉಚಿತವಾಗಿ ಈ ಪರೀಕ್ಷೆಗೆ ಒಳಪಡಬಹುದು. ಯಾವುದೇ ಆತಂಕ ಮತ್ತು ಅಳುಕು ಇಲ್ಲದೆ ಜಿಲ್ಲಾಡಳಿತದೊಂದಿಗೆ ಸಹಕರಿಸಿ, ಮುಕ್ತವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.

      ಇದೇ ಸಂದರ್ಭದಲ್ಲಿ ಮಾತನಾಡಿದ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಜಯರಾಮ್, ಸಾರ್ವಜನಿಕರು ಕೊರೋನಾ ಬಗ್ಗೆ ಭಯ ಪಡದೆ ಮುಂಜಾಗ್ರತೆಯನ್ನು ವಹಿಸಬೇಕು. ಸದಾ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಸ್ವಚ್ಛತೆಯಿಂದ ಇರಬೇಕೆಂದು ಸಲಹೆ ನೀಡಿದರು.

      ಈ ಸಂದರ್ಭದಲ್ಲಿ ಪದವಿ ಕಾಲೇಜುಗಳ ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link