ತುಮಕೂರು:
ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೊಬ್ಬರಿಗೆ ಗಾಯಗಳಾಗಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಮೃತ ವ್ಯಕ್ತಿಯನ್ನು ಗದಗ ನಗರದ ವಾಸಿ ಸುನೀಲ್ ಸಿದ್ದನಗೌಡ ಪಾಟೀಲ್ ಎಂದು ಗುರುತಿಸಲಾಗಿದ್ದು, ಗಾಯಗೊಂಡ ಮತ್ತೋರ್ವ ವ್ಯಕ್ತಿಯನ್ನು ಬೆಂಗಳೂರಿನ ಶಫಿ ಎಂದು ತಿಳಿದು ಬಂದಿದೆ. ಕಾರುಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Death-acc.jpg)