ತುಮಕೂರು :
ನಗರದಲ್ಲಿ ಆಶ್ರಯ ಮನೆ ಯೋಜನೆಯಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಇ ಹಿಂದೆ ಅವಕಾಶ ಕಲ್ಪಿಸಲಾಗಿತ್ತು. ಸದರಿಯವರು 22 ಸಾವಿರಕ್ಕೂ ಹೆಚ್ಚು ಆನ್‍ಲೈನ್ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದರಲ್ಲಿ 4 ಸಾವಿರ ಅರ್ಜಿಗಳು ಮಾತ್ರ ಅರ್ಹವಾಗಿರುತ್ತದೆ. ಮತ್ತೊಂದೆಡೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮಗೂ ಅರ್ಜಿ ಸಲ್ಲಿಸಲು ಅವಕಾಶ ಕೊಡಿ, ನಾವು ಅರ್ಹರು ಎಂದು ನೂರಾರು ಸಾರ್ವಜನಿಕರು ನನ್ನ ಬಳಿ ಬಂದು ಅಳಲು ತೋಡಿಕೊಂಡಿದ್ದಾರೆ. ಈ ಕಾರಣದಿಂದ ಈ ಸಭೆಯ ನಿರ್ಣಯದಂತೆ ಮತ್ತೊಮ್ಮೆ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಯೋಜನೆಗೆ ಅಜಿ ಸಲ್ಲಿಸಲು ಅವಕಾಶ ಮಾಡಿಕೊಡಲು ಮಾನ್ಯ ವಸತಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ತಿಳಿಸಿದರು.
ಅವರು ತಮ್ಮ ಶಾಸಕ ಕಛೇರಿಯಲ್ಲಿ ನಗರ ಆಶ್ರಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ತುಮಕೂರು ನಗರದಲ್ಲಿ ಸೈಟ್ ಹಂಚಿಕೆ ಮಾಡಲು ಸಾಧ್ಯವಿಲ್ಲ. ಸರ್ಕಾರಿ ಜಮೀನುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದು, ಜಿ+2 ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಈಗಾಗಲೇ 4 ಕಡೇ ಸರ್ಕಾರಿ ಜಮೀನುಗಳನ್ನು ಗುರುತಿಸಲಾಗಿದ್ದು, ಸರ್ಕಾರಿ ಜಮೀನುಗಳಿಗೆ ಜಿ.ಪಿ.ಎಸ್ ಕೋ-ಆರ್ಡಿನೇಟರ್ ಸರ್ವೆ ನಡೆಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ಮಹಾನಗರಪಾಲಿಕೆಯ ಮಹಾಪೌರರಾದ ಬಿ.ಜಿ.ಕೃಷ್ಣಪ್ಪ, ಆಯುಕ್ತರಾದ ರೇಣುಕಾ, ಸ್ಮಾರ್ಟ್‍ಸಿಟಿ ಎಂ.ಡಿ ರಂಗಸ್ವಾಮಿ, ತಹಶೀಲ್ದಾರ್ ಮೋಹನ್, ಸರೋಜಗೌಡ, ವಿಜಯ್ ಪ್ರಕಾಶ್.ಎನ್.ಡಿ, ಸಿದ್ದಗಂಗಯ್ಯ, ಸ್ಲಂ ಬೋರ್ಡ್‍ನ ಎ.ಇ.ಇ ಲೋಕೇಶ್ವರಪ್ಪ ಹಾಗೂ ಪಾಲಿಕೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ