ತುಮಕೂರು : ಬಾಲಕಿಗೆ ಲೈಂಗಿಕ ಕಿರುಕುಳ ; ಅಪರಾಧಿಗೆ 5 ವರ್ಷ ಶಿಕ್ಷೆ!!

 ತುಮಕೂರು : 

      ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದ ಆರೋಪಿಗೆ ಇಲ್ಲಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ಕೃಷ್ಣಯ್ಯ ಅವರು ಪೋಕ್ಸೋ ವಿಶೇಷ ಪ್ರಕರಣ 168/19 ರ ಅಡಿಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

      9 ವರ್ಷದ ಅಪ್ತಾಪ್ತ ಬಾಲಕಿಯು ಪಕ್ಕದ ಮನೆಯವರಾಗಿದ್ದು, ಈಕೆಗೆ ಆರೋಪಿ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ. ಆರೋಪಿಗೆ ಪೋಕ್ಸೋ ಕಾಯ್ದೆ ಕಲಂ 18/6 ಅಡಿಯಲ್ಲಿ 5 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ, ಐಪಿಸಿ ಕಲಂ 366 (ಎ) ಅಡಿಯಲ್ಲಿ 5 ವರ್ಷ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿ, ನೊಂದ ಬಾಲಕಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

      ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದ ಜಿ.ವಿ. ಗಾಯತ್ರಿರಾಜು ಅವರು ವಾದ ಮಂಡಿಸಿದ್ದರು. ಅರಸೀಕೆರೆ ಸಿಪಿಐ ಸಿ.ವೆಂಕಟೇಶ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link