ತುಮಕೂರು : ಆಡಳಿತಾಧಿಕಾರಿಗಳಿಗೆ ಕಸಾಪ ಅಧಿಕಾರ ಹಸ್ತಾಂತರ

 ತುಮಕೂರು : 

     ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ಅಧಿಕಾರವಧಿ ಅಂತ್ಯಗೊಂಡಿದ್ದು, ಸೆ.3 ಶುಕ್ರವಾರ ರಾಜ್ಯ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಅಧಿಕಾರ ಹಸ್ತಾಂತರಿಸಿದರು.

      ಕಸಾಪ ಕೇಂದ್ರ ಕಚೇರಿಯಲ್ಲಿ ಡಾ.ಮನು ಬಳಿಗಾರ್ ಅವರು ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರ ಪತ್ರ ನೀಡಿದರೆ, ತುಮಕೂರಿನ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅವರು, ಪರಿಷತ್ ಆಡಳಿತಾಧಿಕಾರಿಯಾಗಿ ನಿಯುಕ್ತಿಗೊಂಡಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಭಾರ ಉಪನಿರ್ದೇಶಕ ಶ್ರೀನಿವಾಸ್ ಅವರಿಗೆ ಅಧಿಕಾರ ಹಸ್ತಾಂತರ ಪ್ರಮಾಣ ಪತ್ರ ನೀಡಿ, ಹಣಕಾಸು ವ್ಯವಹಾರಗಳನ್ನು ಅವರ ಸುಪರ್ದಿಗೆ ನೀಡಿದರು. ಐದೂವರೆ ವರ್ಷಗಳ ಕಾಲ ಸಹಕರಿಸಿದ ಎಲ್ಲರಿಗೂ ಕೃತಜ್ಞಳಾಗಿದ್ದೇನೆ ಎಂದು ರಮಾಕುಮಾರಿ ನುಡಿದರು.

     ಈ ವೇಳೆ ನಿರ್ಗಮಿತ ಕೋಶಾಧ್ಯಕ್ಷ ಬಿ.ಮರುಳಯ್ಯ, ಗೌ.ಕಾರ್ಯದರ್ಶಿ ಗೋವಿಂದಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸುರೇಶ್ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ