ತುಮಕೂರು : ಹೊಸ ಡಿಸಿ, ಜಿಪಂ ಸಿಇಓಗೆ ಸ್ವಾಗತ ಸಮಾರಂಭ

 ತುಮಕೂರು : 

      ಜಿಲ್ಲೆಯಲ್ಲಿ ಎರಡೂವರೆ ವರ್ಷ ಕಾಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಈಗ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಯಾಗಿರುವ ಡಾ.ರಾಕೇಶ್‍ಕುಮಾರ್ ಅವರಿಗೆ ಬುಧವಾರ ಸಂಜೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಬೀಳ್ಕೊಡುಗೆ ನೀಡಿದರು.

      ಇದೇ ವೇಳೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ವೈ.ಎಸ್.ಪಾಟೀಲ್ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಆಗಿ ಅಧಿಕಾರ ವಹಿಸಿಕೊಂಡಿರುವ ಜಿ.ಎಂ.ಗಂಗಾಧರಸ್ವಾಮಿ ಅವರನ್ನು ಸ್ವಾಗತಿಸಲಾಯಿತು.

      ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರರಾದ ಮೋಹನ್‍ಕುಮಾರ್, ತೇಜಸ್ವಿನಿ, ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಮತ್ತಿತರ ಅಧಿಕಾರಿಗಳು ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ರಾಕೇಶ್‍ಕುಮಾರ್ ಅವರೊಂದಿಗೆ ಕಾರ್ಯನಿರ್ವಹಿಸಿದ ಅನುಭವ, ಈ ವೇಳೆ ಅವರು ನೀಡಿದ ಮಾರ್ಗದರ್ಶನ ಸ್ಮರಣೆ ಮಾಡಿಕೊಂಡರು.

     ಸಿದ್ದಗಂಗಾ ಮಠದ ಡಾ.ಶಿವಕುಮಾಸ್ವಾಮೀಜಿಗಳು ಅಸ್ವಸ್ಥರಾದ ಸಂದರ್ಭದಲ್ಲಿ ಡಾ.ರಾಕೇಶ್‍ಕುಮಾರ್ ಅವರು ಜಿಲ್ಲಾಡಳಿತದ ಪರವಾಗಿ ಕಾಳಜಿಯಿಂದ, ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಿದರು.

      ಸ್ವಾಮೀಜಿಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ಮಠಕ್ಕೆ ಬಂದ ಲಕ್ಷಾಂತರ ಭಕ್ತರು ಯಾವುದೇ ಗೊಂದಲವಿಲ್ಲದೆ, ದರ್ಶನ ಮಾಡಿಕೊಂಡು ಹೋಗಲು, ಮಾಡಿದ ವ್ಯವಸ್ಥೆ, ಅದಕ್ಕಾಗಿ ಜಿಲ್ಲಾಧಿಕಾರಿಗಳು ಇತರೆ ಅಧಿಕಾರಿಗಳ ಜೊತೆ ಸೇರಿ ಮಾಡಿದ ಯೋಜನೆಗಳು ಮೆಚ್ಚಗೆಗೆ ಪಾತ್ರವಾದವು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಕಿಸಾನ್ ಸಮ್ಮಾನ್ ರಾಷ್ಟ್ರಮಟ್ಟದ ಕಾರ್ಯಕ್ರಮವನ್ನು ಸಹ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ಸಮರ್ಪಕವಾಗಿ ನಿರ್ವಹಣೆ ಮಾಡಿ ಮೆಚ್ಚುಗೆ ಗಳಿಸಿದರು ಎಂದು ಅಧಿಕಾರಿಗಳು ನೆನಪು ಮಾಡಿಕೊಂಡರು.

      ಕೋವಿಡ್ ಕಾಣಿಸಿಕೊಂಡ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸೃಷ್ಠಿಯಾದ ಆತಂಕ, ಅದನ್ನು ಡಾ.ರಾಕೇಶ್‍ಕುಮಾರ್ ಅವರು ನಿಭಾಯಿಸಿದ ಪರಿ, ವೈದ್ಯಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿಯಲ್ಲಿ ಆತ್ಮವಿಶ್ವಾಸ ತುಂಬಿ ಅತ್ಯಂತ ಯಶಸ್ವಿಯಾಗಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಶ್ರಮಿಸಿದ್ದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಹಲವು ಯೋಜನೆಗಳ ಅನುಷ್ಠಾನದಲ್ಲಿ ಕೈಕೆಳಗಿನ ಅಧಿಕಾರಿಗಳನ್ನು ಒತ್ತೊಟ್ಟಿಗೆ ತೆಗೆದುಕೊಂಡು ಸಮರ್ಪಕವಾಗಿ ನಿರ್ವಹಣೆ ಮಾಡಿದರು.

      ಡಾ.ರಾಕೇಶ್‍ಕುಮಾರ್ ಅವರು ಜಿಲ್ಲಾಧಿಕಾರಿಗಳಾಗಿ, ಜಿಲ್ಲಾ ದಂಡಾಧಿಕಾರಿಗಳಾಗಿ ಆ ಸ್ಥಾನಕ್ಕೆ ಎಳ್ಳಷ್ಟೂ ಚ್ಯುತಿ ಬಾರದಂತೆ ನಿರ್ವಹಿಸಿದರು, ಜಿಲ್ಲಾ ದಂಡಾಧಿಕಾರಿ ಮಾತ್ರವಲ್ಲದೆ ಕೆಳಗಿನ ಅಧಿಕಾರಿಗಳ ಪಾಲಿಗೆ ದಂಡನಾಯಕರಾಗಿ ಸಮರ್ಥವಾಗಿ ಆಡಳಿತ ನಿರ್ವಹಣೆ ಮಾಡಿ ಯಶಸ್ವಿಯಾಗಿದ್ದಾರೆ ಎಂದು ಹಲವು ಅಧಿಕಾರಿಗಳು ಡಾ.ರಾಕೇಶ್‍ಕುಮಾರ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

      ಸಮಾರಂಭದಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ವಂಶಿಕೃಷ್ಣ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap