ತುಮಕೂರು:
ಭಾರತಿ ನಗರದ ಅಕ್ಕ ತಂಗಿ ಕೆರೆ ಮುಂಭಾಗ ಬೆಂಗಳೂರು ಕಡೆಗೆ ಹೋಗುವ ಎನ್.ಎಚ್.-48 ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಸುಮಾರು 26 ವಷರ್ಧದ ಯುವಕನಿಗೆ ಯಾವುದೋ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿದ ಪರಿಣಾಮ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣವಿದ್ದು, ಮೈಮೇಲೆ ಮಾಸಲು ಬಣ್ಣದ ಟೀ ಶರ್ಟ್ ಹಾಗೂ ಕಪ್ಪು ನೈಟ್ ಪ್ಯಾಂಟ್ ಧರಿಸಿರುತ್ತಾರೆ. ಈ ಅಪರಿಚಿತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಸಂಚಾರಿ ಪೊಲೀಸರನ್ನಾಗಲಿ ಅಥವಾ 9480802947 ಇವರನ್ನು ಸಂಪರ್ಕಿಸುವುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ