ತುಮಕೂರು : ಸಿವಿಲ್ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಸಾವು!!

 ತುಮಕೂರು:

     ನಗರದ ಸಿವಿಲ್ ಬಸ್ ನಿಲ್ದಾಣದ ಬಳಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಿವಿಲ್ ಬಸ್ ನಿಲ್ದಾಣದ ಗೌರಿಬಿದನೂರು ಕಡೆಗೆ ಹೋಗುವ ನಿಲ್ದಾಣದಲ್ಲಿ ಈ ವ್ಯಕ್ತಿ ಮೃತಪಟ್ಟಿದ್ದು, ಈತ ಮಲಗಿರುವ ಸ್ಥಿತಿಯಲ್ಲಿನೇ ಅಸುನೀಗಿದ್ದಾನೆ.

     ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿರುವ ಈತ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್, ಆಕಾಶ ನೀಲಿ ಬಣ್ಣದ ಕಪ್ಪು ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದಾನೆ. ಈ ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link