ತುಮಕೂರು ಬಸ್‌ ನಿಲ್ದಾಣಕ್ಕೆ ಅರಸು ಹೆಸರು ನಾಮಕರಣ ….!

ತುಮಕೂರು : 

    ತುಮಕೂರು ನೂತನ ಬಸ್ ನಿಲ್ದಾಣಕ್ಕೆ ದೇವರಾಜು ಅರಸು ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಜಿಲ್ಲಾಡಳಿತ ಜಿಲ್ಲಾಪಂಚಾಯತ್, ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು.

    ತುಮಕೂರು ನಗರದಲ್ಲಿ ಇಡೀ ಜಿಲ್ಲೆಗೆ ಸರ್ಕಾರದಿಂದ ಕೊಡುವ ಸೌಲಭ್ಯಗಳಡಿ 30 ಸಾವಿರ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನ ವಿತರಣೆ ಮಾಡಲಾಗಿದೆ. 657 ಕೋಟಿ 27ಲಕ್ಷ. ರೂ‌. ವೆಚ್ಚ ತಗುಲಿದೆ‌. ಜೊತೆಗೆ ನೂತನವಾಗಿ ಬಸ್ ನಿಲ್ದಾಣ ಉದ್ಘಾಟಿಸಲಾಗಿದ್ದು, ದೇವರಾಜ ಅರಸು ಬಸ್ ನಿಲ್ದಾಣ ನಾಮಕರಣ ಮಾಡಲಾಗಿದೆ. ದೇವರಾಜ ಅರಸು ಅವರ ಹೆಸರಲ್ಲಿ ಬಸ್ ನಿಲ್ದಾಣ ಕಾರ್ಯನಿರ್ವಹಿಸಲಿದೆ ಎಂದರು‌.

   ಸರ್ಕಾರದಲ್ಲಿ ಹಣ ಇಲ್ಲ. ಸರ್ಕಾರ ದಿವಾಳಿಯಾಗಿದೆ ಎನ್ನುವವರಿಗೆ ಈ ಕಾರ್ಯಕ್ರಮಗಳೇ ಉತ್ತರ. ನಮ್ಮ ಸರ್ಕಾರ ದಿವಾಳಿಯಾಗಿಲ್ಲ. ಗ್ಯಾರಂಟಿ  ಯೋಜನೆ ಜಾರಿ ಮಾಡಲಿಕ್ಕೆ ಸಾಧ್ಯವಿಲ್ಲ. ಜಾರಿಯಾದರೆ ಸರ್ಕಾರ ದಿವಾಳಿಯಾಗಲಿದೆ ಎಂದು ಪ್ರಧಾನಿಯವರೆ ಹೇಳಿದ್ದರು‌‌. ಆದರೆ ನಾವು ದಿವಾಳಿಯಾಗಿಲ್ಲ.3.80 ಸಾವಿರ ಕೋಟಿ ಬಜೆಟ್ ಮಂಡಿಸಲಾಗುವುದು ಎಂದರು.

   ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸುತ್ತೆವೆ. ಜೊತೆಗೆ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡುತ್ತೇವೆ. ಯಾವುದೆ ಯೋಜನೆ ನಿಂತಿಲ್ಲ ಎಂದರು ಈ ವರ್ಷ ಗ್ಯಾರಂಟಿ ಯೋಜನೆಗೆ 38 ಸಾವಿರ ಕೋಟಿ ನೀಡಲಾಗಿದೆ. ಸಂಪನ್ಮೂಲ ಕ್ರೋಢೀಕರಣ ಮಾಡಲಾಗಿದೆ.

   ಮುಂದಿ‌ನ ವರ್ಷ 58 ಸಾವಿರ ಕೋಟಿ ಕೊಡುತ್ತೆವೆ. ಯಾವುದೇ ಕಾರಣದಿಂದ ‌ಗ್ಯಾರಂಟಿ ನಿಲ್ಲಿಸಲ್ಲ. ಮುಂದುವರೆಯುತ್ತವೆ‌ ಐದು ವರ್ಷದ ಅವಧಿಯಲ್ಲಿ ಐದು ಗ್ಯಾರಂಟಿ ಮುಂದುವರೆಯಲಿವೆ ಎಂದರು.

   ತುಮಕೂರು ಜಿಲ್ಲೆಯಲ್ಲಿ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿದ್ದಾರೆ. ಹಾಗಾಗಿ ನಿಮಗೆಲ್ಲರಿಗೂ ಅಭಿನಂದನೆ. ನಿಮ್ಮೆಲ್ಲರ ಆಶೀರ್ವಾದದಿಂದ ಎರಡನೆ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಅಧಿಕಾರಕ್ಕೆ ಬಂದ ನಂತರ ಎಲ್ಲಾ ಜನಾಂಗಕ್ಕೂ ಅನುಕೂಲ ಮಾಡಲಾಗಿದೆ. ಕಾಂಗ್ರೆಸ್ ಕೊಟ್ಟ ಮಾತಿನಂತೆ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದೇವೆ. ಇದರ ಜೊತೆಗೆ ಇನ್ನೂ 20ರಿಂದ 30 ಕಾರ್ಯಕ್ರಮಗಳನ್ನು ಹೆಚ್ಚುವರಿಯಾಗಿ ಕೊಟ್ಟಿದ್ದೇವೆ ಎಂದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap