ತುಮಕೂರು :
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅಧ್ಯಕ್ಷತೆಯಲ್ಲಿ ತುಮಕೂರು ನಗರದ ಶಾಲಾ ಕಾಲೇಜುಗಳ ಅಭಿವೃದ್ಧಿ ಬಗ್ಗೆ ಚರ್ಚಿಸಿ, ಅನುದಾನ ಬಿಡುಗಡೆ ಮಾಡಲು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ತುಮಕೂರು ನಗರದ 2 ಶಾಲೆಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಕನಸು ಇದ್ದು, ಈ ಸಂಬಂಧ ಪೂರ್ವ ಸಿದ್ಧತೆ ಮಾಡಲು ಶಾಸಕರು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಸಮಗ್ರ ಶಿಕ್ಷಣ ನಿರ್ದೇಶಕರಾದ ದೀಪ ಚೌಳನ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಸ್ನೇಹಲ್, ತುಮಕೂರು ಜಿಲ್ಲೆಯ ಉಪನಿರ್ದೇಶಕರುಗಳು, ಆರ್.ಎಂ.ಎಸ್.ಎ ಅಧಿಕಾರಿಗಳು, ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಯೋಜನಾ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ