ತುಮಕೂರು : ಕೋವಿಡ್ ಸೋಂಕಿನ ಪ್ರಮಾಣ ಶೇ.4.5% ರಷ್ಟಕ್ಕೆ ಇಳಿಕೆ!!

 ತುಮಕೂರು : 

      ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಗಣನೀಯವಾಗಿ ತಗ್ಗಿದೆ. ಕೊರೋನಾ ಎರಡನೇ ಅಲೆ ಆರಂಭದಲ್ಲಿ ಶೇ.40ಕ್ಕಿಂತ ಹೆಚ್ಚಿದ್ದ ಪಾಸಿಟಿವಿಟಿ ಪ್ರಮಾಣ ಪ್ರಸ್ತುತ ಶೇ. 4.5 ರಷ್ಟಕ್ಕೆ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.

      ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪೂರ್ಣ ನಿಯಂತ್ರಣಕ್ಕೆ ಜಿಲ್ಲಾಡಳಿತ ಶ್ರಮಿಸುತ್ತಿದೆ. ಪ್ರತಿನಿತ್ಯ 6,500 ಯಿಂದ 7000 ಸಾವಿರ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರದ ನಿರ್ದೇಶನದಂತೆ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ಮುಂದಿನ 15 ದಿನಗಳ ಕಾಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಸತತವಾಗಿ ನಡೆಸಲು ನಿರ್ಧರಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಯಾವುದೇ ವ್ಯಕ್ತಿ ಚಿಕಿತ್ಸೆಗೆ ಬಂದರೆ ಅವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದರು.

      ಆರೋಗ್ಯ ಇಲಾಖೆಯೊಂದಿಗೆ ನಡೆದ ಸಭೆಯಲ್ಲಿ ಮಾರುಕಟ್ಟೆ, ಬ್ಯಾಂಕ್ ಸೇರಿದಂತೆ ಅತೀ ಹೆಚ್ಚು ಜನಸಂದಣಿ ಸೇರಲು ನಿರೀಕ್ಷಿಸಲಾಗಿರುವ ಪ್ರದೇಶಗಳಾದ ಗಾಮೆರ್ಂಟ್ಸ್, ಆಹಾರ ತಯಾರಿಕಾ ಕೈಗಾರಿಕೆ ಹಾಗೂ ಇತರೆ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬ್ಯಾಂಕ್, ಪೆಟ್ರೋಲ್ ಬಂಕ್ , ಕೋ ಆಪರೇಟಿವ್ ಸೊಸೈಟಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೋಂಕಿನ ಲಕ್ಷಣಗಳುಳ್ಳ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಸೂಚಿಸಲಾಗಿದೆ ಎಂದರು.

      ಅನಗತ್ಯ ಸಂಚಾರ ಬೇಡ ಲಾಕ್ ಡೌನ್ ಸಡಿಲಿಕೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ತಿರುಗಾಡಬಾರದು. ಅವಶ್ಯವಿದ್ದರಷ್ಟೇ ಮನೆಯಿಂದ ಹೊರಬರಬೇಕು. ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೊರೋನಾ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap