ತುಮಕೂರು :
ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ ವತಿಯಿಂದ ಆಗಸ್ಟ್ 13ರಂದು ಬೆಳಿಗ್ಗೆ 9 ಗಂಟೆಗೆ ನಗರದ ಟೌನ್‍ಹಾಲ್ ಸರ್ಕಲ್ ಬಳಿ ಇರುವ ಜಯದೇವ ಕಾಂಪ್ಲೆಕ್ಸ್ ಅನನ್ಯ ಇನ್ಸ್‍ಟಿಟ್ಯೂಟ್ ಆಫ್ ಕಾಮರ್ಸ್ & ಮ್ಯಾನೇಜ್‍ಮೆಂಟ್ ಕಛೇರಿಯಲ್ಲಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಯಾವುದೇ ಪದವಿ, ಐಟಿಐ, ಡಿಪ್ಲೋಮಾ ಪೂರೈಸಿರುವ, ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಉದ್ಯೋಗಾಕಾಂಕ್ಷಿಗಳಿಗಾಗಿ ಈ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು, ಮೇಳದಲ್ಲಿ ಬೆಂಗಳೂರು ಹಾಗೂ ತುಮಕೂರಿನ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರ ಹಾಗೂ ಶಾಲಾ ದಾಖಲಾತಿಗಳೊಂದಿಗೆ ಮೇಳದಲ್ಲಿ ನೇರವಾಗಿ ಭಾಗವಹಿಸಬಹುದಾಗಿದ್ದು, ಗೂಗಲ್ ಲಿಂಕ್ https://tinyurl.com/job-mela-Tumkur2021 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2255652, ಮೊ.ಸಂ.9971723577/ 9448989874ನ್ನು ಸಂಪರ್ಕಿಸಬಹುದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ