ತುಮಕೂರು:
ತುಮಕೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ವಿಭಾಗವು ಸೆಪ್ಟಂಬರ್ 21 ರಂದು ಗಣರಾಜ್ಯೋತ್ಸವ ಪೂರ್ವಭಾವಿ ಪಥಸಂಚಲನದ ರಾಜ್ಯ ಮಟ್ಟದ ಆಯ್ಕೆ ಶಿಬಿರವನ್ನು ತುಮಕೂರು ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು ಹಾಗೂ ಸಂಯೋಜಿತ ಕಾಲೇಜುಗಳ ಸುಮಾರು 250ಕ್ಕೂ ಹೆಚ್ಚು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ/ಕಿಯರು ಭಾಗವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ವೈ.ಎಂ.ಉಪಿನ್, ರಾಜ್ಯ ಯುವಜನಾಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಪ್ರಾದೇಶಿಕ ಕಛೇರಿ ಬೆಂಗಳೂರು ಇವರು ನೆರವೇರಿಸಿದರು. ಕಾರ್ಯಕ್ರಮದ ಪ್ರಾಸ್ತಾವಿಕ ಮಾತುಗಳನ್ನು ಡಾ.ಲೋಕೇಶ್ ಎಂ.ಯು.
ಕಾರ್ಯಕ್ರಮ ಸಂಯೋಜನಾಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ, ತುಮಕೂರು ವಿಶ್ವವಿದ್ಯಾನಿಲಯರವರು ನುಡಿದರು. ಕಾರ್ಯಕ್ರಮದ ಆಯ್ಕೆ ಸಮಿತಿಯ ತೀರ್ಪುಗಾರರಾಗಿ ಸುದೀಪ್‍ಕುಮಾರ್ ಆರ್, ಸಂಯೋಜಕರು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಲೆಪ್ಟೆನೆಂಟ್ ಮೋಹನ್ ಪ್ರಕಾಶ್, ಸಹ.ಎನ್.ಸಿ.ಸಿ. ಅಧಿಕಾರಿಗಳು, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು ಹಾಗೂ ವಿವಿಧ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
