ತುಮಕೂರು :
ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ವೈ.ಎಸ್. ಪಾಟೀಲ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿರುವ ಹಿಂದಿನ ಜಿಲ್ಲಾಧಿಕಾರಿಗಳಾದ ಡಾ.ಕೆ.ರಾಕೇಶ್‍ಕುಮಾರ್ ಅವರಿಂದ ನೂತನ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರ ವಹಿಸಿಕೊಂಡರು.
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿಗಳ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಮಾಹಿತಿ ಪಡೆದರು. ಅಧಿಕಾರ ವಹಿಸಿಕೊಂಡ ನೂತನ ಜಿಲ್ಲಾಧಿಕಾರಿಗಳನ್ನು ನಿರ್ಗಮಿತ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್, ಉಪವಿಭಾಗಾಧಿಕಾರಿ ಅಜಯ್ ಅಭಿನಂದಿಸಿದರು.
ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಟಿ ಲಿಂ. ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಮಠದ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಸದರಿಯವರು ಇದಕ್ಕು ಮುನ್ನ ಉಪವಿಭಾಗಾಧಿಕಾರಿಯಾಗಿ ವಿಜಯಪುರ ಹಾಗೂ ತಿಪಟೂರು ಉಪವಿಭಾಗ, ಆಯುಕ್ತರು ಬೆಳಗಾವಿ ಮಹಾನಗರಪಾಲಿಕೆ, ಆಯುಕ್ತರು ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ, ಪ್ರಧಾನ ವ್ಯವಸ್ಥಾಪಕರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ(ಕೆಯುಐಡಿಎಫ್‍ಸಿ), ಆಯುಕ್ತರು ತೋಟಗಾರಿಕಾ ಇಲಾಖೆ, ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾಧಿಕಾರಿ ವಿಜಯಪುರ, ಆಯುಕ್ತರು ಭೂಮಾಪನ ಮತ್ತು ಕಂದಾಯ ವ್ಯವಸ್ಥೆ(ಸರ್ವೇ ಸೆಟ್ಲುಮೆಂಟ್)ಆಗಿ ಸೇವೆ ಸಲ್ಲಿಸಿರುವ ಇವರು ಈಗ ಜಿಲ್ಲಾಧಿಕಾರಿಯಾಗಿ ತುಮಕೂರಿಗೆ ಆಗಮಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ