ತುಮಕೂರು
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಪ್ರಮಾಣ. ವಚನ ಸ್ವೀಕಾರ ಸಮಾರಂಭದಲ್ಲಿ ನಿಯೋಜಿತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಜೊತೆಗೆ ಎಂಟು ಮಂದಿ ಹಿರಿಯ ನಾಯಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ಶುಕ್ರವಾರ ಮಧ್ಯರಾತ್ರಿ ಮೊದಲ ಹಂತದ ಮಂತ್ರಿ ಸ್ಥಾನ ದ ಪಟ್ಟಿಗೆ ವರಿಷ್ಠರ ಅನುಮೋದನೆ ಪಡೆದು ಸಿದ್ದರಾಮಯ್ಯ ಬೆಂಗಳೂರಿಗೆ ಮರಳಿದ್ದಾರೆ.
ಮೊದಲ ಪಟ್ಟಿಯಲ್ಲಿ ಎಂಟು ಮಂದಿಗೆ ಅವಕಾಶ ದೊರೆತಿದ್ದು ತುಮಕೂರಿನ ಮೂರು ಪ್ರಭಾವಿ ಆಕಾಂಕ್ಷಿಗಳಲ್ಲಿ ಡಾ. ಜಿ. ಪರಮೇಶ್ವರ್ ಅವರನ್ನು ಮೊದಲ ಪಟ್ಟಿಯಲ್ಲಿ ಹೈಕಮಾಂಡ್ ಮಂತ್ರಿ ಸ್ಥಾನ ಒದಗಿಸಿದೆ.
*ನೂತನ ಸಚಿವರ ಪಟ್ಟಿ.*
ಎಂ.ಬಿ. ಪಾಟೀಲ್, ಡಾ.ಜಿ. ಪರಮೇಶ್ವರ, ಕೆ .ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್ ,ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ