ತುಮಕೂರು : ಶಾಸಕ ಗೌರಿಶಂಕರ್‌ಗೆ ಕೊರೊನಾ ಪಾಸಿಟಿವ್!!

ತುಮಕೂರು: 

     ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

     ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಸ್ಪಷ್ಟಪಡಿಸಿದ್ದು, ನೆನ್ನೆ ಜ್ವರ ಇದ್ದ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್-19 ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು   ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಇನ್ನು ಶಾಸಕರಿಗೆ ಗುಣಲಕ್ಷಣಗಳು ಹೆಚ್ಚಿಲ್ಲದ ಕಾರಣ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ಸಲಹೆ ಪಡೆಯುತ್ತಿದ್ದಾರೆ. ಅಲ್ಲದೆ ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ