ತುಮಕೂರು :
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ 20ನೇ ಸ್ಥಾನದಲ್ಲಿದ್ದ ತುಮಕೂರು ಜಿಲ್ಲೆ ಈ ಬಾರಿ 16ನೇ ಸ್ಥಾನಕ್ಕೆ ಏರಿಕೆ ಕಂಡಿದೆ.
ಈ ಬಾರಿ ಜಿಲ್ಲೆಯಲ್ಲಿ 22198 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 16683 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 75.16% ಫಲಿತಾಂಶ ಬಂದಿದೆ. ಕಳೆದ 2023ನೇ ವರ್ಷದ ಸಾಲಿನಲ್ಲಿ ೨೦ನೇ ಸ್ಥಾನಕ್ಕೆ ಕುಸಿದಿದ್ದ ಶೈಕ್ಷಣಿಕ ನಗರಿ ತುಮಕೂರು ಜಿಲ್ಲೆ ಈ ಬಾರಿ 16ನೇ ಸ್ಥಾನಕ್ಕೆ ಏರಿಕೆ ಕಂಡಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಸುದ್ದಿಗೋಷ್ಠಿಯಲ್ಲಿ ಎಲ್ಲಾ ಶಾಲೆಗಳ ಫಲಿತಾಂಶ ಪ್ರಕಟವಾಗಿದೆ. ಅಧಿಕೃತ ವೆಬ್‌ಸೈಟ್‌ಗಳಲ್ಲೂ ಫಲಿತಾಂಶ ಲಭ್ಯವಿರಲಿದೆ.
2023-2024 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಈ ಬಾರಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. 625 ಅಂಕಕ್ಕೆ 625 ಅಂಕವನ್ನು ಬಾಗಲಕೋಟೆಯ ಅಂಕಿತ ಬಸ್ಸಪ್ಪ ಎಂಬ ವಿದ್ಯಾರ್ಥಿನಿ ಪಡೆದಿದ್ದಾರೆ.
ಜಿಲ್ಲಾವಾರು ಮಾಹಿತಿ ನೋಡುವುದಾದರೆ- ಅಧಿಕ ಅಂಕ ಪಡೆದ ಜಿಲ್ಲೆಗಳಲ್ಲಿ ಉಡುಪಿ ಮೊದಲನೇ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ಹಾಸನ, ಮೈಸೂರು, ಸಿರಸಿ ನಂತರದ ಸ್ಥಾನದಲ್ಲಿ ಇದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಅಥವಾ kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕವೂ ಪರಿಶೀಲಿಸಬಹುದು.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ(Karnataka SSLC Results 2024) ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಗೊಳಿಸಿದೆ. ಬಳಿಕ ಫಲಿತಾಂಶ karresults.nic.in ವೆಬ್ಸೈಟ್ನಲ್ಲಿ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದು.
ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಯಿತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದಿದ್ದವು