ತುಮಕೂರು :
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಶ್ರೀರಾಮುಲು ಸೆಪ್ಟೆಂಬರ್ 7ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಪಾವಗಡ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ಲೋಕಾರ್ಪಣೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ 11 ಗಂಟೆಗೆ ಪಳವಳ್ಳಿಯ ತಾಲ್ಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ, ಮಧ್ಯಾಹ್ನ 12.30ಕ್ಕೆ ಮಧುಗಿರಿ ತಾಲ್ಲೂಕಿನ ಸೊಂದೇನಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ಲೋಕಾರ್ಪಣೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ, ಮಧ್ಯಾಹ್ನ 2 ಗಂಟೆಗೆ ಶಿರಾ ನಗರದ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ, ಸಂಜೆ 4 ಗಂಟೆಗೆ ತುಮಕೂರು ಕ್ಯಾತ್ಸಂದ್ರದಲ್ಲಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ, ಸಂಜೆ 4.15ಕ್ಕೆ ಮರಳೂರು: ಕ್ಯಾತ್ಸಂದ್ರದಲ್ಲಿನ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ ಹಾಗೂ 4.30ಕ್ಕೆ ತುಮಕೂರು ನಗರದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
