ತುಂಗಭದ್ರಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ​ ನೀರು ಬಿಡುಗಡೆ

ಕೊಪ್ಪಳ

    ಕಳೆದ ವರ್ಷ ಕ್ರೆಸ್ಟ್ ಗೇಟ್ ಮುರಿದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿದ್ದ ತುಂಗಭದ್ರಾ ಜಲಾಶಯಕ್ಕೆ ಈ ಬಾರಿ ಭಾರಿ ಮಳೆಯ ಕಾರಣ ಒಳಹರಿವು ಹೆಚ್ಚಾಗಿದೆ. ಸದ್ಯ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ತುಂಗಭದ್ರಾ ಡ್ಯಾಂನ 7 ಗೇಟ್​ಗಳಿಗೆ ಹಾನಿಯಾಗಿರುವ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದರು. ಈ ಬಾರಿ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಹೆಚ್ಚಿನ ಪ್ರಮಾಣದ ನೀರು ಜಲಾಶಯಕ್ಕೆ ಬಂದಿದೆ. ನೀರಿನ ಒತ್ತಡದಿಂದ ಈ 7 ಗೇಟ್​ಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದರು. ಹೀಗಾಗಿ ಜಲಾಶಯದಿಂದ ನೀರು ಬಿಡುಗಡೆ ಮಾಡುವುದು ಅನಿವಾರ್ಯವೂ ಆಗಿದೆ.

Recent Articles

spot_img

Related Stories

Share via
Copy link