ನೆನೆಗುದಿಗೆ ಬಿದ್ದಿದ್ದ ವಾಣಿಜ್ಯ ಸಂಕೀರ್ಣ ಕಾಮಗಾರಿಗೆ ಚಾಲನೆ

 ತುರುವೇಕೆರೆ : 

      ಪಟ್ಟಣದ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ಮಸಾಲ ಜಯರಾಮ್ ತಿಳಿಸಿದರು.

      250 ಲಕ್ಷ ರೂಗಳ ವೆಚ್ಚದಲ್ಲಿ ಪಟ್ಟಣದ ವಾಣಿಜ್ಯ ಸಂಕೀರ್ಣದ ಮುಂದುವರೆದ ಕಟ್ಟಡ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಾಣಿಜ್ಯ ಸಂಕೀರ್ಣಕ್ಕೆ ಹೊಸ ರೂಪ ಕೊಟ್ಟು ಹೈಟೆಕ್ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಗುತ್ತಿಗೆದಾರರು ಉತ್ತಮ ಗುಣ ಮಟ್ಟದಲ್ಲಿ ವೇಗವಾಗಿ ಕಾಮಗಾರಿ ಮುಗಿಸಿ ನವೆಂಬರ್ ಅಥವಾ ಡಿಸೆಂಬರ್‍ನೊಳಗೆ ಬಿಟ್ಟು ಕೊಡಬೇಕು ಎಂದು ಟೈಂ ಬಾಂಡ್ ನೀಡಿದ ಅವರು ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಈ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.

      ಸುಮಾರು ವರ್ಷಗಳಿಂದ ಉಪಯೋಗಕ್ಕೆ ಬಾರದ ಪಟ್ಟಣದ ಒಳ ಚರಂಡಿ ಕಾಮಗಾರಿ ಪೂರ್ಣ ಗೊಳಿಸಲು ಸುಮಾರು 11 ಕೋಟಿ 70 ಲಕ್ಷ ಅನುದಾನ ಮೀಸಲಿಡಲಾಗಿದ್ದು ಉತ್ತಮ ಗುತ್ತಿಗೆದಾರರಿಗೆ ಟೆಂಡರ್ ಹಾಕಲಿದೆ. ದೆಬ್ಬೇಘಟ್ಟ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಆಗಮಿಸುತ್ತಿದ್ದು, ಅಂಗಡಿ ಮಾಲೀಕರು ಹಾಗೂ ಬಾಡಿಗೆದಾರರ ಸಭೆಯಲ್ಲಿ ತಿರ್ಮಾನಿಸಿದಂತೆ ರಸ್ತೆ ಕಾಮಗಾರಿ ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

      ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಂಜನ್‍ಕುಮಾರ್, ಉಪಾಧ್ಯಕ್ಷೆ ಭಾಗ್ಯ, ಸದಸ್ಯರಾದ ಯಜಮಾನ್‍ಮಹೇಶ್, ಎನ್.ಆರ್.ಸುರೇಶ್, ಚಿದಾನಂದ್, ಪ್ರಭಾಕರ್, ಶೀಲಾ, ಸಪ್ನನಟರಾಜು, ರವಿ, ಆಶಾರಾಣಿ, ಮೇಘಾನಾ, ಮಧು, ಜಯಮ್ಮ, ಮುಖ್ಯಾಧಿಕಾರಿ ಮಂಜುಳಾದೇವಿ, ಇಂಜಿನಿಯರ್ ಸತ್ಯನಾರಾಯಣ್ ಇತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap