ತುರುವೇಕೆರೆ :
ತಾಲ್ಲೂಕಿನ ಕಸಬಾ ವ್ಯಾಪ್ತಿಯ ಹುಲಿಕೆರೆ ಗ್ರಾಮದ ಹೊರವಲಯದಲ್ಲಿ ನೆಲಕ್ಕೆ ಹರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಯುವಕ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಮೃತ ಯುವಕ ಹುಲಿಕೆರೆ ಗ್ರಾಮದ ನಿವಾಸಿ ಸುರೇಶ್ ಅವರ ಮಗ ಆನಂದ್(22). ಈತನು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ಮೇಕೆಗೆ ಮೇವು ತರಲು ಗಂಗಣ್ಣನವರ ತೋಟಕ್ಕೆ ತೆರಳಿದ್ದಾಗ ಅಲ್ಲಿ ವಿದ್ಯುತ್ ಲೈನ್ ತುಂಡರಿಸಿ ಬಿದ್ದಿದ್ದನ್ನು ಅರಿಯದೆ ಆಕಸ್ಮಿಕವಾಗಿ ತುಳಿದ ಹಿನ್ನೆಲೆಯಲ್ಲಿ ಆನಂದ್‍ನಿಗೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
