ತುರುವೇಕೆರೆ :
ಲಾಕ್‍ಡೌನ್ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ತಾಲ್ಲೂಕಿನ ಹಲವು ಕಡೆ ಅಬಕಾರಿ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ ಸಾವಿರಾರು ರೂಪಾಯಿಗಳ ಮೌಲ್ಯದ 40 ಲೀಟರ್‍ಗೂ ಅಧಿಕ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅನಗತ್ಯ ವಾಹನಗಳ ಓಡಾಟಕ್ಕೆ ಪೊಲೀಸರು ಕಡಿವಾಣ ಹಾಕಿದ್ದರಿಂದ ಹಳ್ಳಿಗಳಲ್ಲಿ ಗುಪ್ತವಾಗಿ ಅಕ್ರಮವಾಗಿ ಮದ್ಯ ಮಾರಾಟ ಸದ್ದಿಲ್ಲದೆ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿಯೊಂದಿಗೆ ಅಬಕಾರಿ ನಿರೀಕ್ಷಕ ಬಿ.ಎಲ್.ರವಿಶಂಕರ್ ನೇತೃತ್ವದಲ್ಲಿ ತಾಲ್ಲೂಕಿನ ವಿವಿಧ ಕಡೆ ದಾಳಿ ನಡೆಸಲಾಗಿ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿಯಲ್ಲಿ 5 ಲೀಟರ್ ಮದ್ಯ, ಕಸಬಾ ಹೋಬಳಿಯ ಹರಿದಾಸನಹಳ್ಳಿಯಲ್ಲಿ 12 ಲೀಟರ್ ಮದ್ಯ ಹಾಗು ಬೈಕ್, ದಂಡಿನಶಿವರ ಹೋಬಳಿಯ ದುಂಡಾ ಗ್ರಾಮದಲ್ಲಿ 10 ಲೀಟರ್, ಗೋಣಿ ತುಮಕೂರಿನಲ್ಲಿ 15 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ ತಾಲ್ಲೂಕಿನ ವಿವಿಧ ಭಾಗಗಳ ಪೆಟ್ಟಿಗೆ ಅಂಗಡಿಗಳಲ್ಲಿ ಮಧ್ಯ ಮಾರಾಟ ಮಾಡುತ್ತಿದ್ದ 20 ಅಂಗಡಿ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಅಬಕಾರಿ ಉಪನಿರೀಕ್ಷಕರಾದ ರವಿಶಂಕರ್, ರಾಚಮ್ಮ, ಸಿಬ್ಬಂದಿಗಳಾದ ಮಂಜುನಾಥ್, ರಾಮು, ಕೇಶವ್ ಮತ್ತು ನರಸಿಂಹಮೂರ್ತಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
