ತುರುವೇಕೆರೆ :
ಕೋವಿಡ್ ಲಾಕ್‍ಡೌನ್‍ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಎಲ್ಲ ಖಾಸಗಿ ಶಾಲಾ, ಕಾಲೇಜುಗಳ ಶಿಕ್ಷಕರು, ಸಿಬ್ಬಂದಿಗಳು ಹಾಗು ಉಪನ್ಯಾಸಕರುಗಳಿಗೆ ಆರ್ಥಿಕ ನೆರವು ನೀಡುವಂತೆ ಜಿಲ್ಲೆಯ ಶಾಸಕರಾದ ರಾಜೇಶ್‍ಗೌಡ ಹಾಗೂ ಜ್ಯೋತಿಗಣೇಶ್ ಅವರೊಂದಿಗೆ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಮನವಿ ಸಲ್ಲಿಸಲಾಯಿತೆಂದು ಶಾಸಕ ಮಸಾಲಜಯರಾಮ್ ತಿಳಿಸಿದರು.
ಕೋವಿಡ್ ಅಲೆಯಿಂದ ಖಾಸಗಿ ಶಾಲಾ, ಕಾಲೇಜುಗಳು ಸ್ಥಗಿತಗೊಂಡು ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿಗಳ ಬದುಕು ಅತಂತ್ರಗೊಂಡಿದೆ. ಶಿಕ್ಷಕ ವೃತ್ತಿಯನ್ನೇ ನಂಬಿ ಬದುಕುತ್ತಿದ್ದ ಕುಟುಂಬಗಳು ಈಗ ಬೀದಿಗೆ ಬಂದಿರುವ ಬಗ್ಗೆ ನಾನು ಸೇರಿದಂತೆ ಮತ್ತಿಬ್ಬರು ಶಾಸಕರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಸಂಕಷ್ಟದಲ್ಲಿರುವ ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿಗಳ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಪೂರಕವಾಗಿ ಸ್ಪಂದಿಸಿದ್ದು. ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಆರ್ಥಿಕ ನೆರವು ಘೋಷಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ರೀತಿ ನೇಕಾರರ ವೃತ್ತಿ ಬದುಕಿನ ಮೇಲೆ ಕೋವಿಡ್ ಕರಿನೆರಳು ಬೀರಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ನೇಕಾರರು ತಮ್ಮ ವೃತ್ತಿಯನ್ನು ಸ್ಥಗಿತಗೊಳಿಸಿದ್ದಾರೆ. ತೀವ್ರ ಸಂಕಷ್ಟದಲ್ಲಿರುವ ನೇಕಾರರಿಗೆ ನೆರವು ನೀಡುವಂತೆ ಮನವಿ ಮಾಡಲಾಯಿತು. ಇದಕ್ಕೆ ಶೀಘ್ರ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
