ತುಮಕೂರು:
ಗಂಭೀರ ಗಾಯ
ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿಯ ದುರ್ಗದಹಳ್ಳಿಯಲ್ಲಿ ಗುರುವಾರ ಮುಂಜಾನೆಯಲ್ಲಿ ಬಹಿರ್ದೆಸೆಗೆಂದು ತೆರಳಿದ್ದ ವ್ಯಕ್ತಿಯೋರ್ವನ ಮೇಲೆ ಎರಡು ಕರಡಿ ದಾಳಿ ಮಾಡಿದ್ದು,ವ್ಯಕ್ತಿ ಗಂಭೀರ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳು ತಿಮ್ಮರಾಜು ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ. ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಮಹಜರು ಮಾಡಿದ್ದಾರೆ. ಗ್ರಾಮದಲ್ಲಿ ಆಗಾಗ ಕರಡಿ ದಾಳಿಗಳು ಸಂಭವಿಸುತ್ತಲೇ ಇದ್ದು, ಕೂಡಲೇ ಕರಡಿಗಳನ್ನು ಹಿಡಿಯಬೇಕೆಂದು ಮನವಿ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ