ಗುಜರಾತ್:
ವಲ್ಸಾದ್ ಜಿಲ್ಲೆಯಲ್ಲಿನ ಒಂದು ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದ ತೀರ್ವತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಸಾರಿಗಾಮ್ ಸಿಐಡಿಸಿ ರಾಸಾಯನಿಕ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದಾಗ್ಯೂ, ಯಾವ ರಾಸಾಯನಿಕ ಎಂಬುದು ತಿಳಿಯದೆ ಬೆಂಕಿ ನಂದಿಸಲು ನೀರನ್ನು ಬಳಸಲಿಲ್ಲ.
ಇಲ್ಲಿಯವರೆಗೂ ಎರಡು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ತೆರಳಿದಾಗ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ಯಾವ ರಾಸಾಯನಿಕ ಎಂಬುದು ತಿಳಿಯದೆ ಅಗ್ನಿ ನಿಯಂತ್ರಣ ಕಾರ್ಯಾಚರಣೆಯನ್ನು ಆರಂಭಿಸಲಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ರಾಹುಲ್ ಮುರಾರಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
