ದೋಡಾ :ಇಬ್ಬರು ಯೋಧರಿಗೆ ಗಾಯ…!

ಜಮ್ಮು: 

    ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು ಗುರುವಾರ ಮುಂಜಾನೆ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಸ್ತಿಗಢ್ ಪ್ರದೇಶದ ಜದ್ದನ್ ಬಟಾ ಗ್ರಾಮದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಎನ್‌ಕೌಂಟರ್ ನಡೆದಿದ್ದು, ಸದ್ಯ ದಾಳಿ ನಿಂತಿದೆ. ಯೋಧರ ಶೋಧ ಕಾರ್ಯಾಚರಣೆಗೆ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ಭದ್ರತಾ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ಎನ್ ಕೌಂಟರ್ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅದಕ್ಕೆ ರಕ್ಷಣಾ ಕ್ರಮವಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಎರಡು ಕಡೆಯ ನಡುವೆ ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆಯಿತು. ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ,

    ಮೊನ್ನೆ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಪ್ಟನ್ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ ನಂತರ ದೇಸಾ ಮತ್ತು ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. 

    ಕಾರ್ಯಾಚರಣೆ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆ ಮತ್ತು ಮೊನ್ನೆ ಮಧ್ಯರಾತ್ರಿ ದೇಸಾ ಅರಣ್ಯದ ಎರಡು ಸ್ಥಳಗಳಲ್ಲಿ ಗುಂಡಿನ ಚಕಮಕಿ ನಡೆದಿದೆ.2005 ರಲ್ಲಿ ಭಯೋತ್ಪಾದನೆಯಿಂದ ಮುಕ್ತವಾದ ದೋಡಾ ಜಿಲ್ಲೆ, ಜೂನ್ 12 ರಿಂದ ಚಟರ್ಗಾಲಾ ಪಾಸ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರು ಭದ್ರತಾ ಸಿಬ್ಬಂದಿ ಗಾಯಗೊಂಡ ನಂತರ ಸರಣಿ ದಾಳಿಗಳಿಗೆ ಸಾಕ್ಷಿಯಾಗಿದೆ, ಮರುದಿನ ಗಂಡೋದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಗಾಯಗೊಂಡರು.

    ಜೂನ್ 26 ರಂದು ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಒಂದು ದಿನದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರು, ಜುಲೈ 9 ರಂದು ಘಾಡಿ ಭಗವಾ ಅರಣ್ಯದಲ್ಲಿ ಮತ್ತೊಂದು ಎನ್‌ಕೌಂಟರ್ ಸಂಭವಿಸಿದೆ.ಈ ವರ್ಷದ ಆರಂಭದಿಂದ ಜಮ್ಮು ಪ್ರಾಂತ್ಯದ ಆರು ಜಿಲ್ಲೆಗಳಲ್ಲಿ ನಡೆದ ಸುಮಾರು ಹನ್ನೆರಡು ಭಯೋತ್ಪಾದಕ ದಾಳಿಗಳಲ್ಲಿ 11 ಭದ್ರತಾ ಸಿಬ್ಬಂದಿ, ಗ್ರಾಮ ರಕ್ಷಣಾ ಸಿಬ್ಬಂದಿ ಮತ್ತು ಐವರು ಭಯೋತ್ಪಾದಕರು ಸೇರಿದಂತೆ ಒಟ್ಟು 27 ಜನರು ಮೃತಪಟ್ಟಿದ್ದಾರೆ.

    ಮೃತಪಟ್ಟವರಲ್ಲಿ ಜೂನ್ 9 ರಂದು ರಿಯಾಸಿ ಜಿಲ್ಲೆಯ ಶಿವ ಖೋರಿ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಏಳು ಯಾತ್ರಾರ್ಥಿಗಳು ಸೇರಿದ್ದಾರೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಎರಡು ಕಡೆಯವರ ನಡುವೆ ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆಯಿತು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link