ತೆರವಾದ ಎರಡು ಸ್ಥಾನಗಳಿಗೆ ಹೊಸ ಹೆಸರು ಸೂಚಿಸಿದ ದೆಹಲಿ ಸಿಎಂ

ನವದೆಹಲಿ:

     ದೆಹಲಿ ಡಿ ಸಿಎಂ ಆಗಿದ್ದ ಮನೀಷ್ ಸಿಸೋಡಿಯಾ ಮತ್ತು ಸಚಿವ  ಸತ್ಯೇಂದ್ರ ಜೈನ್ ಅವರ  ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸಚಿವ ಸಂಪುಟದ ಎರಡು ಸ್ಥಾನಗಳಿಗೆ ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಶಿಫಾರಸ್ಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

     ಸಿಎಂ ಅವರು, ಲೆಫ್ಟಿನೆಂಟ್ ಗವರ್ನರ್ ಅವರಿಗೆ ಈ ಎರಡು ಹೆಸರುಗಳನ್ನು ಕಳುಹಿಸಿಕೊಟ್ಟಿದ್ದು ಹಗರಣದ ಆರೋಪ ಹೊತ್ತಿರುವ ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ನಿನ್ನೆ ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ, ಸರ್ಕಾರದ ನಿರ್ವಹಣೆ ದೃಷ್ಟಿಯಿಂದ ಇಬ್ಬರು ಶಾಸಕರ ಹೆಸರನ್ನು ಸಚಿವ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

    ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಜಾರಿಯಲ್ಲಿ ಅಕ್ರಮ ಎಸಗಿರುವ ಆರೋಪದಡಿ ಭಾನುವಾರ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಜೈನ್ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಬಂಧಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap