ಮೊದಲೆರಡು ಸ್ಥಾನದಲ್ಲಿ ಎರಡು ಹೊಸ ತಂಡಗಳು: ಐಪಿಎಲ್ 2022 ಅಂಕಪಟ್ಟಿ ಇಲ್ಲಿದೆ ನೋಡಿ

IPL 2022:
ಐಪಿಎಲ್ 2022ರ ಪಾಯಿಂಟ್ ಟೇಬಲ್  ಹೇಗಿದೆ?, ಆರೆಂಜ್  ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ.

ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ.

17ನೇ ದಿನವೂ ಮುಂದುವರಿದ ‘ಕೆಜಿಎಫ್ 2’ ಅಬ್ಬರ; ಯಶ್ ಎದುರು ಮಂಕಾದ ಅಜಯ್​ ದೇವಗನ್, ಟೈಗರ್ ಸಿನಿಮಾ

ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಹಾರ್ದಿಕ್ ಪಡೆ 16 ಅಂಕದೊಂದಿಗೆ ಪ್ಲೇ ಆಫ್ ಹಾದಿ ಖಚಿತ ಪಡಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ IPL 2022ರ ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್  ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ‘ಬಸವಶ್ರೀ’ ಪ್ರಶಸ್ತಿ ನಾಳೆ ಪ್ರದಾನ

ಪಾಯಿಂಟ್ ಟೇಬಲ್:

  1. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಒಂಬತ್ತು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಸೋಲು, ಎಂಟರಲ್ಲಿ ಗೆಲುವು ಕಂಡು 16 ಅಂಕದೊಂದಿಗೆ ಪ್ಲೇ ಆಫ್ ಪ್ರವೇಶಿಸುವುದು ಪಕ್ಕಾ ಆಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.377 ಆಗಿದೆ.
  2. ಮತ್ತೊಂದು ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಎರಡನೇ ಸ್ಥಾನಕ್ಕೆ ಜಿಗಿದಿದೆ. ಆಡಿದ 9 ಪಂದ್ಯಗಳ ಪೈಕಿ ಏಳರಲ್ಲಿ ಗೆದ್ದು ಒಟ್ಟು 14 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.397 ಆಗಿದೆ.
  3. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಇವರು ಆಡಿದ ಒಂಬತ್ತು ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ಮೂರರಲ್ಲಿ ಸೋಲುಂಡು ಒಟ್ಟು 12 ಅಂಕ ಸಂಪಾದಿಸಿದೆ. ಆರ್​ಆರ್​ +0.450 ರನ್​​ರೇಟ್ ಹೊಂದಿದೆ.
  4. ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಐದರಲ್ಲಿ ಜಯ ಸಾಧಿಸಿ 10 ಅಂಕ ಸಂಪಾದಿಸಿ 0.471 ರನ್ ರೇಟ್ ಹೊಂದಿದೆ.
  5. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐದನೇ ಸ್ಥಾನದಲ್ಲಿದ್ದು, ಆಡಿದ ಹತ್ತು ಪಂದ್ಯಗಳಲ್ಲಿ ತಲಾ ಐದರಲ್ಲಿ ಸೋಲು-ಗೆಲುವು ಕಂಡಿದೆ. ಹತ್ತು ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.558 ಆಗಿದೆ.

ಪಿಎಸ್‌ಐ ಪರೀಕ್ಷೆ ಅಕ್ರಮ: ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

  1. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಒಂದು ಸ್ಥಾನ ಮೇಲಕ್ಕೇರಿದ್ದು ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. 8 ಅಂಕದೊಂದಿಗೆ ಡೆಲ್ಲಿಯ ನಿವ್ವಳ ರನ್ ರೇಟ್ 0.587 ಆಗಿದೆ.
  2. ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಏಳನೇ ಸ್ಥಾನದಲ್ಲೇ ಇದೆ. 8 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ -0.470 ಆಗಿದೆ.
  3. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ. ಆಡಿದ ಒಂಬತ್ತು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಆರರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ -0.006 ರನ್​​ರೇಟ್​ ಹೊಂದಿದೆ.
  4. ಇತ್ತ ಆಡಿದ ಒಂಬತ್ತು ಪಂದ್ಯಗಳ ಪೈಕಿ 6 ರಲ್ಲಿ ಸೋಲು ಮೂರರಲ್ಲಿ ಗೆಲುವು ಕಂಡಿರುವ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ಅಂಕದೊಂದಿಗೆ -0.407 ರನ್​ರೇಟ್​​ ಹೊಂದಿ ಒಂಬತ್ತನೇ ಸ್ಥಾನದಲ್ಲಿದೆ.
  5. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಕೊನೆಗೂ ಖಾತೆ ತೆರೆದಿರುವ ಎಂಐ ಆಡಿದ 9 ಪಂದ್ಯದ ಪೈಕಿ ಒಂದರಲ್ಲಿ ಜಯ ಸಾಧಿಸಿದೆ. ಮುಂಬೈ ನಿವ್ವಳ ರನ್ ರೇಟ್ -0.836.

ಇಂದಿನಿಂದ ಪ್ರಧಾನಿ ಮೋದಿ 3 ದಿನ ವಿದೇಶ ಪ್ರವಾಸ: ಜರ್ಮನಿ, ಡೆನ್ಮಾರ್ಕ್, ಫ್ರಾನ್ಸ್ ಗೆ ನಮೋ ಭೇಟಿ

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಮೂರು ಶತಕದೊಂದಿಗೆ ಇವರು 9 ಪಂದ್ಯಗಳಿಂದ 566 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಇವರು 451 ರನ್ ಗಳಿಸಿದ್ದಾರೆ.

ಮೂರನೇ ಸ್ಥಾನದಲ್ಲಿ ಅಭಿಷೇಕ್ ಶರ್ಮಾ ಅವರಿದ್ದು ಆಡಿದ ಒಂಬತ್ತು ಪಂದ್ಯಗಳಿಂದ 324 ರನ್ ಸಿಡಿಸಿದ್ದಾರೆ. ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ 8 ಪಂದ್ಯಗಳಿಂದ 308 ರನ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಮುಂಬೈ ತಂಡದ ತಿಲಕ್ ವರ್ಮಾ 5ನೇ ಸ್ಥಾನಕ್ಕೆ ಏರಿದ್ದು 9 ಪಂದ್ಯಗಳಿಂದ 307 ರನ್ ಸಂಪಾದಿಸಿದ್ದಾರೆ.

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ಜೆಎಸ್‌ಎಸ್‌ ವೈದ್ಯಕೀಯ ಕಾಲೇಜಿನಲ್ಲಿ ಬ್ರಿಡ್ಜ್ ಕೋರ್ಸ್‌

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ 9 ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 19 ವಿಕೆಟ್ ಕಬಳಿಸಿದ್ದಾರೆ.

ಕುಲ್ದೀಪ್ ಯಾದವ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಎಂಟು ಪಂದ್ಯಗಳಿಂದ 17 ವಿಕೆಟ್ ಕಿತ್ತಿದ್ದಾರೆ. ಟಿ. ನಟರಾಜನ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು ಒಂಬತ್ತು ಪಂದ್ಯಗಳಿಂದ 17 ವಿಕೆಟ್ ಕಿತ್ತಿದ್ದಾರೆ. ಇವರ ಜೊತೆಗೆ ವನಿಂದು ಹಸರಂಗ ಕೂಡ 4ನೇ ಸ್ಥಾನದಲ್ಲಿದ್ದು 10 ಪಂದ್ಯಗಳಿಂದ 15 ವಿಕೆಟ್ ಹಾಗೂ ಉಮ್ರಾನ್ ಮಲಿಕ್ ಕೂಡ 15 ವಿಕೆಟ್ ಕಿತ್ತು 5ನೇ ಸ್ಥಾನದಲ್ಲಿದ್ದಾರೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap