ಬೆಂಗಳೂರು
ಸದನದಲ್ಲಿನ ಹಿರಿಯರು ಮತ್ತು ರಾಜಕೀಯದಲ್ಲಿ ಹೆಚ್ಚಿನ ಅನುಭವ ಇರುವ ಧುರೀಣರೂ ಆದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಈ ಕುರಿತು ಗುರುವಾರ ಶೂನ್ಯ ವೇಳೆಯಲ್ಲಿ ಸಿದ್ದರಾಮಯ್ಯ ಕುರಿತಾಗಿ ಸಚಿವ ಅಶ್ವತ್ಥ ನಾರಾಯಣ ವಿವಾದಾತ್ಮಕ ಹೇಳಿಕೆಯನ್ನ ಪ್ರಸ್ತಾಪ ಮಾಡಿದ ಅವರು, ಕಳೆದ ಒಂದು ತಿಂಗಳಿಂದ ದ್ವೇಷ ಭಾಷಣ ಮಾಡಲಾಗುತ್ತಿದೆ. ಉಳ್ಳಾಲ, ತುಮಕೂರಿನಲ್ಲಿ ಮಾತನಾಡಿದ್ದಾರೆ, ಇದು ಅಂತ್ಯ ಕಾಣಬೇಕು ಎಂದು ಆಗ್ರಹಿಸಿದರು. ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಮೀರ್ ಸಾದಿಕ್ ವಂಶಸ್ಥರು ತುಂಬಾ ಜನ ಇದ್ದಾರೆ. ಚುನಾವಣೆಯಲ್ಲಿ ನೇರ ನೇರ ಫೈಟ್ ಮಾಡದೆ, ಹಿಂದಿನಿಂದ ಜನರನ್ನು ಪ್ರಚೋದನೆ ಮಾಡುತ್ತಾರೆ ಸಚಿವರ ವಿರುದ್ದ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಬೇಕು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
