ವಿಧಾನಸಭಾಧ್ಯಕ್ಷರಾಗಿ ಯು ಟಿ ಖಾದರ್‌ ಆಯ್ಕೆ

ಬೆಂಗಳೂರು 

     ಕಾಂಗ್ರೆಸ್ ನಾಯಕ ಯುಟಿ ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲು ನಿರ್ಧರಿಸಲಾಗಿದೆ. ಯು.ಟಿ.ಖಾದರ್ ಅವರು ಐದನೇ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅವರು ಆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಯಕನಿಗೆ ಬೆಂಬಲ ಸೂಚಿಸುವ ನಾಮಪತ್ರಕ್ಕೆ ಸಹಿ ಹಾಕುವ ವಿಧಿವಿಧಾನಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಡಲಿದ್ದಾರೆ.

    ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 12ರ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ ಎಂದು ವಿಧಾನಸಭೆ ಬುಲೆಟಿನ್ ಹೊರಡಿಸಿದೆ.

     ಹೆಚ್.ಕೆ.ಪಾಟೀಲ್ ಅವರ ಹೆಸರು ಘೋಷಣೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೀಗ ಈ ನಾಮನಿರ್ದೇಶನ ಅಚ್ಚರಿ ಮೂಡಿಸಿದೆ. ವರದಿಗಳ ಪ್ರಕಾರ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಯುಟಿ ಖಾದರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

     ಬೊಮ್ಮಾಯಿ ನಗು ನಗುತ್ತಾ ಫೋಟೋಗೆ ಹೇಗೆ ಪೋಸ್ ಕೊಟ್ರು ನೋಡಿ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತ ಕೊನೆ ಎಂದು ಗೋಮೂತ್ರದಿಂದ ವಿಧಾನಸೌಧವನ್ನು ಸ್ವಚ್ಛಗೊಳಿಸಿದ ಕಾಂಗ್ರೆಸ್ ಇದಕ್ಕೂ ಮುನ್ನ ದೇಶಪಾಂಡೆ ಅವರನ್ನು ಸ್ಪೀಕರ್ ಹುದ್ದೆಯನ್ನು ನಿಭಾಯಿಸಲು ಕೇಳಲಾಯಿತು. ಆದರೆ, ಅವರು ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಹುದ್ದೆಯನ್ನು ನಿರಾಕರಿಸಿದರು. ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಚ್‌ಕೆ ಪಾಟೀಲ್ ಅವರನ್ನು ಕೂಡ ಸ್ಪೀಕರ್ ಹುದ್ದೆಗೆ ಪಕ್ಷ ಪರಿಗಣಿಸಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನೂ ಸಂಪರ್ಕಿಸಲಾಗಿತ್ತು. ಆದರೆ ಇದು ಯಾವುದೂ ಆಗದೇ ಇದ್ದಾಗ ಯುಟಿ ಖಾದರ್ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಕಳೆದ ವಿಧಾನಸಭೆಯಲ್ಲಿ ಉಪ ವಿರೋಧ ಪಕ್ಷದ ನಾಯಕರಾಗಿದ್ದರು. ಈ ವರ್ಷ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ.

    ಎರಡು ವರ್ಷಗಳ ನಂತರ ನಡೆಯಲಿರುವ ಸಂಪುಟ ಪುನಾರಚನೆ ವೇಳೆ ಯುಟಿ ಖಾದರ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಆದರೀಗ ಯುಟಿ ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿರುವುದು ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಅವಕಾಶ ನೀಡುವಲ್ಲಿ ಕಾಂಗ್ರೆಸ್‌ನ ಗಮನ ಹರಿಸಿರುವುದನ್ನು ತೋರಿಸುತ್ತದೆ. ಪ್ರಮುಖ ಸ್ಥಾನಗಳಲ್ಲಿ ತಮ್ಮ ಪ್ರಾತಿನಿಧ್ಯವನ್ನು ಉಳಿಸಿಕೊಳ್ಳಲು ಪಕ್ಷವೂ ಪ್ರಯತ್ನಿಸುತ್ತಿದೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಉಳಿದ ರಾಜ್ಯಗಳ ಕಾಂಗ್ರೆಸ್‌ ಪಕ್ಷಗಳಿಗೆ ಪ್ರಮುಖ ಪ್ರೇರಣೆ ಆಗಿ ಕೆಲಸ ಮಾಡಿದೆ.

    ಹೀಗಾಗಿ ಬಿಹಾರ ಸಿಎಂ ನಿತೇಶ್ ಕುಮಾರ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಎನ್‌ಸಿಪಿ ನಾಯಕ ಶರದ್ ಕುಮಾರ್ ಸೇರಿದಂತೆ ಹಲವು ಪ್ರತಿಪಕ್ಷಗಳ ನಾಯಕರು ಕರ್ನಾಟಕ ಸಿಎಂ ಮತ್ತು ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟಿತು. ಲೋಕಸಭೆ ಚುನಾವಣೆ 2024ಕ್ಕೆ ತಯಾರಿ ನಡೆಸಲು ಪ್ರತಿಪಕ್ಷಗಳು ಸಕ್ರಿಯವಾಗಿ ಒಂದಾಗಲು ಪ್ರಯತ್ನಿಸುತ್ತಿವೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸೋಮವಾರದಂದು ವಿಪಕ್ಷಗಳು ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿವೆ ಎಂದು ಸೋಮವಾರ ಹೇಳಿದ್ದಾರೆ.

    ಸದ್ಯಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷದ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಹೊಣೆ ಹೊತ್ತಿದ್ದಾರೆ.

Recent Articles

spot_img

Related Stories

Share via
Copy link
Powered by Social Snap