ಉದಯ ನಿಧಿ ಮೇಲೆ ಹೊಸ FIR ಬೇಡ ; ಸುಪ್ರೀಂ ಕೋರ್ಟ್‌

ಚೆನ್ನೈ:

    ಸನಾತನ ಧರ್ಮದ ಕುರಿತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಅನುಮತಿಯಿಲ್ಲದೆ ಯಾವುದೇ ಪ್ರಕರಣಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಉದಯನಿಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾಗಿರುವ ಬಲವಂತದ ಕ್ರಮಗಳ ವಿರುದ್ಧ ಅವರಿಗೆ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.

   ಸೆಪ್ಟೆಂಬರ್ 2023 ರಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಡಿಎಂಕೆ ನಾಯಕ ‘ಸನಾತನ ಧರ್ಮ’ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಮತ್ತು ಅದನ್ನು “ನಿರ್ಮೂಲನೆ” ಮಾಡಬೇಕು ಎಂದು ಹೇಳಿದ್ದರು. ಸನಾತನ ಧರ್ಮ’ವನ್ನು ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿದ ಅವರು, ಅದನ್ನು ನಾಶಪಡಿಸಬೇಕು ಎಂದು ಹೇಳಿದ್ದರು. ನಂತರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಅವರು ಯಾವುದೇ ಧರ್ಮವನ್ನು ಗುರಿಯಾಗಿಸಿ ಟೀಕಿಸಿಲ್ಲ. ಬದಲು ಜಾತಿ ಆಧಾರಿತ ತಾರತಮ್ಯ ಮತ್ತು ಸಾಮಾಜಿಕ ಅನ್ಯಾಯಗಳನ್ನು ಟೀಕಿಸುತ್ತಿದ್ದೇನೆ ಎಂದು ಹೇಳಿದ್ದರು. ಸ್ಟಾಲಿನ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ, ಬಿಹಾರ, ಜಮ್ಮು ಮತ್ತು ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಹಲವಾರು ಎಫ್‌ಐಆರ್‌ಗಳು ದಾಖಲಾಗಿವೆ.

   ಸ್ಟಾಲಿನ್‌ ಪರ ವಾದ ಮಾಡಿದ್ದ ಮಂಡಿಸಿದ ಹಿರಿಯ ವಕೀಲ ಎ.ಎಂ. ಸಿಂಘ್ವಿ, ಹಲವಾರು ರಾಜ್ಯಗಳಲ್ಲಿ ಈಗಾಗಲೇ ದೂರು ದಾಖಲಾಗಿದ್ದು, ಈಗ ಹೊಸದಾಗಿ ಬಿಹಾರದಲ್ಲಿಯೂ ಹೊಸ ದೂರು ದಾಖಲಾಗಿದೆ ಎಂದು ಹೇಳಿದ್ದರು. ವಕೀಲರ ಎದುರು ವಾದ ಮಂಡಿಸಿದ್ದ ಅವರು ಬೇರೆ ರಾಜ್ಯದ ಮುಖ್ಯಮಂತ್ರಿ ಬೇರೆ ಧರ್ಮದ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಉದಾಹರಣೆಗೆ ಇಸ್ಲಾಂ ಅನ್ನು ನಿರ್ಮೂಲನೆ ಮಾಡುವುದು ಎಂದು ಹೇಳಿದ್ದರು. ಇದೀಗ ಸುಪ್ರೀಂ ಕೋರ್ಟ್‌ ನ್ಯಾಯಾಲಯದ ಅನುಮತಿಯಿಲ್ಲದೆ ಯಾವುದೇ ಪ್ರಕರಣಗಳನ್ನು ದಾಖಲಿಸಬಾರದು ಎಂದು ಆದೇಶಿಸಿದೆ. 

   ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಇತ್ತೀಚೆಗೆ ಕೇಂದ್ರದ ಗಡಿ ವಿಂಗಡಣೆ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ನವವಿವಾಹಿತರು ತಕ್ಷಣ ಕುಟುಂಬ ಯೋಜನೆಗಳನ್ನು ರೂಪಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇದರಿಂದ ರಾಜ್ಯಕ್ಕೆ ಕ್ಷೇತ್ರ ವಿಂಗಡಣೆಯಲ್ಲಿ ಅನುಕೂಲವಾಗುತ್ತದೆ ಎಂದು ಅವರು ಹೇಳಿದ್ದರು. ನವವಿವಾಹಿತರು ಕುಟುಂಬ ಯೋಜನೆ ರೂಪಿಸುವ ಮೊದಲು ಸಮಯ ತೆಗೆದುಕೊಳ್ಳುತ್ತಾರೆ. ಆದರೆ ಈಗ ಕೇಂದ್ರ ಸರ್ಕಾರ ಜಾರಿಗೆ ತರಲು ಯೋಜಿಸುತ್ತಿರುವ ಗಡಿ ನಿರ್ಣಯದಂತಹ ನೀತಿಗಳೊಂದಿಗೆ, ನಾವು ಹಾಗೆ ಹೇಳಲು ಸಾಧ್ಯವಿಲ್ಲ. ನಾವು ಕುಟುಂಬ ಯೋಜನೆಯತ್ತ ಗಮನಹರಿಸಿದಕ್ಕಾಗಿಯೇ ಇಂದು ಈ ಪರಿಸ್ಥಿತಿಗೆ ಬಂದಿದ್ದೇವೆ. ಆದ್ದರಿಂದ ನಾನು ಈಗ ನವವಿವಾಹಿತರನ್ನು ತಕ್ಷಣವೇ ಮಕ್ಕಳನ್ನು ಹೆತ್ತು ಅವರಿಗೆ ಒಳ್ಳೆಯ ತಮಿಳು ಹೆಸರುಗಳನ್ನು ಇಡಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದರು.

Recent Articles

spot_img

Related Stories

Share via
Copy link