ಮಾನನಷ್ಟ ಮೊಕದ್ದಮೆ : ಉದ್ದವ್‌ ಮತ್ತು ಅದತ್ಯ ಠಾಕ್ರೆಗೆ ಸಮನ್ಸ್….!

ನವದೆಹಲಿ:

      ಸಂಸದ ರಾಹುಲ್ ರಮೇಶ್ ಶೆವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

    ಇದೇ ಪ್ರಕರಣದಲ್ಲಿ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವತ್ ಅವರಿಗೂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಶಿಂಧೆ ಬಣದ ವಿರುದ್ಧ ಮಾಡಿದ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಶೆವಾಲೆ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap