ಶಿರಸಿ:
ವಲಯ ಮಟ್ಟದ ಕ್ರೀಡಾಕೂಟದಲ್ಲಿ ಉಲ್ಲಾಳಕೊಪ್ಪ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಸಾಧನೆಯ ಮೆಟ್ಟಿಲೇರಿದ್ದಾರೆ.ಗುರುವಾರ ನಡೆದ ಬಿಸಲಕೊಪ್ಪ ವಲಯಮಟ್ಟದ ಕ್ರೀಡಾಕೂಟದಲ್ಲಿ ಉಲ್ಲಾಳಕೊಪ್ಪ ಶಾಲೆಯ ವಿದ್ಯಾರ್ಥಿನಿ ಪ್ರಣತಿ ಗೌಡ ೧೦೦ ಮೀಟರ್, ೨೦೦ ಮೀಟರ್ ಹಾಗೂ ೪೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ವೀರಾಗ್ರಣಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡರೆ,ಅದೆ ಶಾಲೆಯ ವಿದ್ಯಾರ್ಥಿಗಳಾದ ವಿದ್ಯಾ ಗೌಡ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ,
೨೦೦ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಸಾಕ್ಷಿತ್ ಗೌಡ ೬೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದರೆ,ಸಂದೀಪ್ ಗೌಡ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ ,ಸೃಜನ್ ನಾಯ್ಕ ಯೋಗದಲ್ಲಿ ಚತುರ್ಥ ಹಾಗೂ ಹರ್ಷಿತ್ ನಾಯ್ಕ ಪಂಚಮ ಸ್ಥಾನ ಪಡೆದಿದ್ದಾರೆ.
ಬಾಲಕಿಯರ ರಿಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಶಾಲೆಗೆ ಕ್ರೀಡಾ ಕೀರ್ತಿ ಯನ್ನು ತಂದುಕೊಟ್ಟಿದ್ದಾರೆ.ಕನ್ನಡ ಶಾಲೆಯಲ್ಲಿ ಓದುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮತ್ತು ಪಾಲಕರು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.








