ಬೆಂಗಳೂರು:
ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ದತೆಯನ್ನ ನಡೆಸಿದ್ದು, ಇತ್ತ ಕಾಂಗ್ರೆಸ್ ಅಭ್ಯರ್ಥಿಗಳ ವಿಚಾರವೇ ದೊಡ್ಡ ಕಗ್ಗಂಟಾಗಿ ಪರಿಗಣಿಸಿದೆ.
ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ನಾಯಕರು ಘೋಷಿಸಿದ್ದರೂ, ಗೆಲುವು ಕಷ್ಟವಿದೆ ಎಂದು ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ವರದಿ ಬಂದ ಕ್ಷೇತ್ರಗಳ ಶಾಸಕರಿಗೆ ಮತ್ತೆ ಟಿಕೆಟ್ ಸಿಗುವುದು ಕಷ್ಟ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ನಡೆದಿದೆ.
ಇತ್ತ ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ‍್ಧರಾಮಯ್ಯ ಈಗಾಗಲೇ ಸಾಕಷ್ಟು ಬಾರೀ ಸಭೆ ನಡೆಸಿದರು, ಇನ್ನೂ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ.
ಇನ್ನೂ ಟಿಕೆಟ್ ಗಾಗಿ ಜಾತಿವಾರು ಸ್ಥಾನಗಳನ್ನ ಕಾಂಗ್ರೆಸ್ ನಾಯಕರು ಬೇಡಿಕೆ ಇಟ್ಟಿದ್ದು, ಕೆಲ ನಾಯಕರು ಹೈಕಮಾಂಡ್ ನಾಯಕರಿಗೆ ಒತ್ತಡ ಹಾಕುವ ಮೂಲಕ ಟಿಕೆಟ್ ಗಿಟ್ಟಿಸಿಕೊಳ್ಳಲು ಲಾಭಿ ನಡೆಸಿದ್ದಾರೆ. ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ‍್ಧರಾಮಯ್ಯ ಸೇರಿ ಹಲವು ನಾಯಕರು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸದಸ್ಯರ ಜೊತೆ ಚರ್ಚೆ ನಡೆಸಲಿದ್ದು ಆಕಾಂಕ್ಷಿಗಳ ದಂಡು ದೆಹಲಿಯತ್ತ ತೆರಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ