ದೆಹಲಿ :
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ದರವನ್ನು ಹೆಚ್ಚಿಸಲಾಗಿದೆ.
ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ಗೆ ತಲಾ ರೂ. 1 ರಷ್ಟು ಅಬಕಾರಿ ಸುಂಕ ಮತ್ತು ರಸ್ತೆ-ಮೂಲಸೌಕರ್ಯ ಸೆಸ್ ಅನ್ನು ಹೆಚ್ಚಿಸಬೇಕಾಗಿರುವುದರಿಂದ ಇಂಧನ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ. 1 ರಷ್ಟು ಹೆಚ್ಚಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈಗಾಗಲೇ ಪೆಟ್ರೋಲ್ ಬೆಲೆ 70 ರ ಗಡಿ ದಾಟಿದ್ದು, ಮುಂಬೈಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 76.15 ಇದೆ. ಡೀಸೆಲ್ ದರ ಲೀಟರ್ ಗೆ 67.20 ರೂ. ಇದೆ. ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿರುವುದರಿಂದ ಪರಿತಪಿಸುತ್ತಿರುವ ಶ್ರೀಸಾಮಾನ್ಯನಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








